ಸಿದ್ದಾಪುರ: ಸಮೀಪದ ನೆಲ್ಲಿಹುದಿಕೇರಿಯಲ್ಲಿ ಕ್ಲಬ್ ಡೋಮಿನಾಸ್ ಯುವಕ ಸಂಘದ ವತಿಯಿಂದ ಸರ್ಕಾರಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವದರ ಮೂಲಕ ಆಚರಿಸಲಾಯಿತು.ಐಗೂರು: ಇಲ್ಲಿಗೆ ಸಮೀಪದ ಐಗೂರು ಸರ್ಕಾರಿ ಪ್ರೌಢಶಾಲೆಯ ‘ಭುವನಕ್ಕೊಂದು ಸದನ’ ಇಕೋ ಕ್ಲಬ್ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ ಮತ್ತು ವನಮಹೋತ್ಸವ ಆಚರಿಸಲಾಯಿತು.

ದಿನದ ಅಂಗವಾಗಿ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಹಲಸು, ಮಾವು, ಹೊಂಗೆ, ಸೇರಿದಂತೆ ಹಲವು ಔಷಧಿಯ ಸಸಿಗಳನ್ನು ನೆಟ್ಟರು. ನಂತರ ಶಾಲಾ ಆವರಣದಿಂದ ಗ್ರಾಮದ ಮುಖ್ಯ ರಸ್ತೆಯ ಮೂಲಕ ತೆರಳಿ ಪರಿಸರ ರಕ್ಷಣೆ ಕುರಿತು ಘೋಷಣೆಗಳನ್ನು ಕೂಗಿದರು. ಈ ಸಂದರ್ಭ ಶಾಲೆಯ ಪ್ರಬಾರ ಮುಖ್ಯ ಶಿಕ್ಷಕ ಯಶವಂತ್, ಸಹಶಿಕ್ಷಕರು ಉಪಸ್ಥಿತರಿದ್ದರು.ಮಾದಾಪುರ: ಮಾದಾಪುರ ಗ್ರಾಮ ಪಂಚಾಯಿತಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗ್ರಾ.ಪಂ. ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ವಿವಿಧ ಗಿಡಗಳನ್ನು ನೆಡಲಾಯಿತು. ನಂತರ ಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷೆ ಲತಾ, ಉಪಾಧ್ಯಕ್ಷೆ ಭಾರತಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಸೇರಿದಂತೆ ಸದಸ್ಯರುಗಳು ಉಪಸ್ಥಿತರಿದ್ದರು.*ಸಿದ್ದಾಪುರ: ಸಮೀಪದ ಅವರೆಗುಂದ ಹಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭ ಹಾಡಿಯ ಮುಖಂಡ ವಾಸು, ಅರಣ್ಯ ರಕ್ಷಕ ಅಲ್ಬರ್ಟ್, ಅಂಗನವಾಡಿ ಕಾರ್ಯಕರ್ತೆ ಜಯಮ್ಮ, ಗ್ರಾಮ ಪಂಚಾಯಿತಿ ಸದಸ್ಯೆ ಸುಶೀಲಾ ಸೇರಿದಂತೆ ಮತ್ತಿತರರು ಹಾಜರಿದ್ದರು.ಹಾನಗಲ್ಲು: ಸಮೀಪದ ಹಾನಗಲ್ಲು ಗ್ರಾಮ ಪಂಚಾಯಿತಿ ವತಿಯಿಂದ ಪರಿಸರ ದಿನದ ಅಂಗವಾಗಿ ಹೊಸಬೀಡು ಸರ್ಕಾರಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷೆ ರೇಣುಕಾ ವೆಂಕಟೇಶ್, ಉಪಾಧ್ಯಕ್ಷ ಮಿಥುನ್, ಸದಸ್ಯರುಗಳಾದ ಯಶ್‍ವಂತ್, ಪ್ರವೀಣ್, ಪ್ರಕಾಶ್, ಅಭಿವೃದ್ಧಿ ಅಧಿಕಾರಿ ರವೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.ಕಿರಗಂದೂರು: ವಿಶ್ವ ಪರಿಸರ ದಿನ ಅಂಗವಾಗಿ ಸಮೀಪದ ಸೋಮವಾರದಂದು ಕಿರಗಂದೂರು ಗ್ರಾಮದ ಶಾಲಾ ಮೈದಾನದಲ್ಲಿ ಗಿಡ ನೆಡುವ ಮೂಲಕ ಆಚರಿಸಲಾಯಿತು. ಕಿರಗಂದೂರು ಗ್ರಾಮ ಪಂಚಾಯಿತಿ, ಕಿರಗಂದೂರು ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಪ್ರಾಥಮಿಕ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭ ಕಿರಗಂದೂರು ಗ್ರಾಪಂ ಅಧ್ಯಕ್ಷೆ ರಾಧಾ ಏಜಣ್ಣ, ಉಪಾಧ್ಯಕ್ಷ ಎಸ್.ಬಿ. ಸುರೇಂದ್ರ, ಸದಸ್ಯರುಗಳಾದ ಪಿ.ಬಿ. ಪೊನ್ನಪ್ಪ, ಗಿರೀಶ್ ಪೊನ್ನಪ್ಪ, ಸುನು ಕಿಶೋರ್, ಸುಜಾತ, ಪ್ರೇಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಎಸ್. ರಾಜಶೇಖರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಧರ್ಮಪ್ಪ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಮಂಜುನಾಥ್ ಮತ್ತಿತರರು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿದರು.