ಶನಿವಾರಸಂತೆ, ಜು. 26: ಸ್ವಚ್ಛತೆ ಮತ್ತು ಆರೋಗ್ಯ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಪ್ರಾಥಮಿಕ ಶಾಲಾ ಹಂತದಿಂದಲೇ ಮಕ್ಕಳಲ್ಲಿ ಸ್ವಚ್ಛತೆಯ ಅರಿವು ಮೂಡಿಸಬೇಕು ಎಂದು ಹಂಡ್ಲಿ ಕ್ಲಸ್ಟರ್‍ನ ಸಮೂಹ ಸಂಪನ್ಮೂಲ ವ್ಯಕ್ತಿ ಮಧುಕುಮಾರ್ ಹೇಳಿದರು.

ಸಮೀಪದ ಹಾರೆಹೊಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಂಡ್ಲಿ ಕ್ಲಸ್ಟರ್ ವತಿಯಿಂದ ನಡೆದ ಸಂಪೂರ್ಣ ಸ್ವಚ್ಛತಾ ಆಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗೋಪಾಲಪುರದ ಸರ್ಕಾರಿ ಪ್ರಾಥಮಿಕ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ರಮೇಶ್ ಮಾತನಾಡಿ, ಗ್ರಾಮ ಮಟ್ಟದಿಂದಲೇ ಸ್ವಚ್ಛತಾ ಆಂದೋಲನ ಆರಂಭವಾಗ ಬೇಕು ಎಂದರು. ನಿಡ್ತ ಗ್ರಾ.ಪಂ. ಸದಸ್ಯರಾದ ಯಶೋದಾ ಹಾಗೂ ಗಂಗಾಧರ್ ಕಾರ್ಯಕ್ರಮ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಂಸ್ಥೆ ಅಧ್ಯಕ್ಷೆ ಹೂವಮ್ಮ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕಿ ಲಲಿತಾ, ಶಿಕ್ಷಕರಾದ ಆರ್. ದಿವಾಕರ್, ಟಿ.ಆರ್. ಕವಿತಾ, ಕಮಲಾಕ್ಷಿ, ಸುಂದರ್, ಎಸ್‍ಡಿಎಂಸಿ ಸದಸ್ಯರಾದ ರಜನಿ, ರಾಧಿಕಾ, ಗೋಪಾಲಪುರ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಅಪ್ಪಸ್ವಾಮಿ, ವಿವಿಧ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.