ಕೂಡಿಗೆ, ಜೂ. 11: ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಹಯೋಗದಲ್ಲಿ ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಮತ್ತು ಕಾರ್ಯದರ್ಶಿಗಳಿಗೆ ಲೆಕ್ಕ ಪತ್ರ ನಿರ್ವಹಣೆಯ ಕುರಿತು ವಿಶೇಷ ಶಿಕ್ಷಣ ಕಾರ್ಯಾಗಾರ ಕೂಡಿಗೆಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಜಿಲ್ಲಾ ಸಹಕಾರ ಯೂನಿಯನ್‍ನ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ ಉದ್ಘಾಟಿಸಿ ಮಾತನಾಡಿ, ಹೈನುಗಾರಿಕೆಯು ಜಿಲ್ಲೆಯಲ್ಲಿ ಅಭಿವೃದ್ಧಿಗೊಳ್ಳುತ್ತಿದೆ. ಇದರಿಂದ ಸಂಘದ ಅಭಿವೃದ್ಧಿ, ಹಾಲಿನ ಶೇಖರಣೆ, ಸಂಗ್ರಹಣೆ ಮತ್ತು ಲೆಕ್ಕ ನಿರ್ವಹಣೆಗೆ ಸಹಕಾರಿಯಾಗಿದೆ ಎಂದರು.

ಈ ಸಂದರ್ಭ ಹಾಸನ ಹಾಲು ಒಕ್ಕೂಟದ ನಿರ್ದೇಶಕರ ಕೆ.ಟಿ. ಅರುಣ್ ಕುಮಾರ್ ಅವರು ಒಕ್ಕೂಟದಿಂದ ಸಹಕಾರಿ ಸಂಘಗಳ ಸದಸ್ಯರಿಗೆ ದೊರೆಯುವ ಯೋಜನೆಗಳು ಹಾಗೂ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಯೂನಿಯನ್ ಬ್ಯಾಂಕ್‍ನ ನಿರ್ದೇಶಕ ರಾಮಚಂದ್ರ, ಅಚ್ಚಯ್ಯ, ಜಗತ್, ಜೋಯಪ್ಪ ಸೇರಿದಂತೆ ಯೂನಿಯನ್‍ನ ಅಧಿಕಾರಿಗಳು ಹಾಜರಿದ್ದರು.