ಮಡಿಕೇರಿ, ಜು. 18: ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮತ್ತು ನವೋದಯ ವಿದ್ಯಾಲಯ ಗಾಳಿಬೀಡು ಇವರ ಸಂಯುಕ್ತಾಶ್ರಯದಲ್ಲಿ ತಾ. 19 ರಿಂದ 25 ರ ವರೆಗೆ ಗಿಡ ನೆಡುವ ಸಪ್ತಾಹ ಕಾರ್ಯಕ್ರಮ ನಡೆಯಲಿದೆ.

ತಾ. 19 ರಂದು ಬೆಳಗ್ಗೆ 10.30 ಗಂಟೆಗೆ ಗಾಳಿಬೀಡು ನವೋದಯ ವಿದ್ಯಾಲಯದಲ್ಲಿ ಗಿಡನೆಡುವ ಸಪ್ತಾಹದ ಉದ್ಘಾಟನಾ ಕಾರ್ಯಕ್ರ ಮಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಮತ್ತು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಾಸ್ಟರ್ ಆರ್.ಕೆ.ಜಿ.ಎಂ.ಎಂ ಮಹಾ ಸ್ವಾಮೀಜಿ ಚಾಲನೆ ನೀಡಲಿದ್ದಾರೆ.

ಗಾಳಿಬೀಡು ನವೋದಯ ವಿದ್ಯಾಲಯದ ಪ್ರಾಂಶುಪಾಲ ಐಸಾಕ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು, ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕುಂಡಲು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಲಯ ಕಚೇರಿಯ ಹಿರಿಯ ಪರಿಸರ ಅಧಿಕಾರಿ ಕೆ.ಎಂ. ಲಿಂಗರಾಜು, ವಕೀಲರ ಸಂಘದ ಅಧ್ಯಕ್ಷ ಸಿ.ಟಿ. ಜೋಸೆಫ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಉಪಾಧ್ಯಕ್ಷ ಕೆ.ಟಿ. ಬೇಬಿ ಮ್ಯಾಥ್ಯೂ, ಪ್ರಧಾನ ಆಯುಕ್ತ ಕೆ.ಬಿ. ಕಾಳಪ ಜಿಲ್ಲಾ ಪರಿಸರಾಧಿಕಾರಿ ಜಿ.ಆರ್. ಗಣೀಶನ್ ಮತ್ತಿತರರು ಭಾಗವಹಿಸಲಿದ್ದಾರೆ.