ಮಡಿಕೇರಿ, ಜೂ. 8: ಕೊಡಗು ಜಿಲ್ಲಾ ರಿಯಲ್ ಎಸ್ಟೇಟ್ ಬಿಸ್‍ನೆಸ್‍ಮೆನ್ ಅಸೋಸಿಯೇಷನ್ ವತಿಯಿಂದ ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರನ್ನು ಭೇಟಿ ಮಾಡಿ ಸ್ವಾಗತಿಸಲಾಯಿತು.

ಈ ಸಂದರ್ಭ ಅಸೋಸಿಯೇಷನ್ ಅಧ್ಯಕ್ಷ ತೋಲಂಡ ಸೋಮಯ್ಯ, ಗೌರವ ಅಧ್ಯಕ್ಷ ಕೋಡಿ ಚಂದ್ರಶೇಖರ್, ಉಪಾಧ್ಯಕ್ಷ ಮುಬಿನ್ ಅಹಮ್ಮದ್, ಪ್ರಧಾನ ಕಾರ್ಯದರ್ಶಿ ಕಾನೆಹಿತ್ಲು ಮೊಣ್ಣಪ್ಪ, ಖಜಾಂಚಿ ಟ್ರಾವಲ್ ಜಾನ್ಸ್‍ನ್ ಪಿಂಟೊ ಮತ್ತಿತರರು ಹಾಜರಿದ್ದರು.