ಕೂಡಿಗೆ, ಜೂ. 14: ಇಲ್ಲಿಗೆ ಸಮೀಪದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ಅಣೆಕಟ್ಟೆ ಕಾಮಗಾರಿ, ಅಣೆಕಟ್ಟೆಗೆ ಅಳವಡಿಸಿರುವ ಪ್ರಮುಖ ಗೇಟುಗಳ ದುರಸ್ತಿಗೆ ಹಾಗೂ ನಾಲೆ ಗೇಟುಗಳ ದುರಸ್ತ್ತಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವದಕ್ಕೆ ಕಾವೇರಿ ನೀರಾವರಿ ನಿಗಮದ ಮೂಲಕ ರಾಜ್ಯ ಸರ್ಕಾರಕ್ಕೆ ವರದಿ ನೀಡಲಾಗಿತ್ತು.

ಈ ಬಗ್ಗೆ ವಿಶ್ವ ಬ್ಯಾಂಕ್ ಯೋಜನೆಯಡಿಯಲ್ಲಿ ರೂ. 8 ಕೋಟಿ ಹಣ ಮಂಜೂರಾಗಿದ್ದು, ಟೆಂಡರ್ ಪ್ರಕ್ರಿಯೆಗಳು ನಡೆದು ಗುತ್ತಿಗೆದಾರನಿಗೆ ಕಾಮಗಾರಿ ನಿರ್ವಹಿಸಲು ಗುತ್ತಿಗೆ ನೀಡಲಾಗಿದೆ ಎಂದು ಹಾರಂಗಿ ಕಾರ್ಯಪಾಲಕ ಅಭಿಯಂತರ ಎಸ್.ಜಿ. ರಂಗಸ್ವಾಮಿ ತಿಳಿಸಿದ್ದಾರೆ. - ಕೆ.ಕೆ. ನಾಗರಾಜಶೆಟ್ಟಿ.