ಕುಶಾಲನಗರ, ಜೂ. 11: ಕೊಡಗು ಜಿಲ್ಲಾ ಮಡಿಕೇರಿ ವಿಭಾಗ ಅರಣ್ಯ ಇಲಾಖೆ ಆಶ್ರಯದಲ್ಲಿ ಕುಶಾಲನಗರ ಕಾವೇರಿ ಪರಿಸರ ರಕ್ಷಣಾ ಬಳಗ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮತ್ತು ್ತಕುಶಾಲನಗರ ಪಟ್ಟಣ ಪಂಚಾಯ್ತಿ ಸಹಯೋಗದೊಂದಿಗೆ ತಾ. 12 ರಂದು (ಇಂದು) ಆರ್‍ಎಂಸಿ ಆವರಣದಲ್ಲಿ ‘ಪರಿಸರ ಜಾಗೃತಿ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆವರಣದಲ್ಲಿ 1 ಸಾವಿರಕ್ಕೂ ಅಧಿಕ ಗಿಡಗಳನ್ನು ನೆಡುವ ಕಾರ್ಯಕ್ರಮ ನಡೆಯಲಿದ್ದು, ಕ್ಷೇತ್ರ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಚಾಲನೆ ನೀಡುವರು.

ಕುಶಾಲನಗರ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಎಂ.ಎಂ.ಚರಣ್, ಜಿಲ್ಲಾಧಿಕಾರಿ ಡಾ.ಆರ್.ವಿ.ಡಿಸೋಜ, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು, ಕೂಡಾ ಅಧ್ಯಕ್ಷ ಎಸ್.ಎನ್. ನರಸಿಂಹಮೂರ್ತಿ, ಆರ್‍ಎಂಸಿ ಆಡಳಿತ ಅಧಿಕಾರಿಗಳಾದ ತಹಶೀಲ್ದಾರ್ ಶಿವಪ್ಪ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳುವರು.