ಮಡಿಕೇರಿ, ಜೂ. 10: ನೀರುಕೊಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಡಿಕೇರಿ ತಾಲೂಕು ಹಿಂದೂ ಮಲಯಾಳಿ ಸಂಘದ ಪದಾಧಿಕಾರಿಗಳು ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಪೆನ್ಸಿಲ್, ರಬ್ಬರ್ ಹಾಗೂ ಶಾಲಾ ವಿದ್ಯಾರ್ಥಿಗಳ ಶುಲ್ಕ ಪಾವತಿಸಿ ಉದಾರತೆ ಮೆರೆದರು.

ಈ ಸಂದರ್ಭ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ಎಸ್. ರಮೇಶ್, ಉಪಾಧ್ಯಕ್ಷ ಪಿ.ಬಿ. ಭರತ್ ಕುಮಾರ್, ಧರ್ಮೇಂದ್ರ, ಖಜಾಂಚಿ ಉತ್ತಮ್ ಹಾಗೂ ಇನ್ನಿತರ ಪದಾಧಿಕಾರಿಗಳಿದ್ದರು.