ಗೋಣಿಕೊಪ್ಪಲು, ಜೂ. 11: ಇತ್ತೀಚೆಗೆ ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ಅವರು ಗಿಡನೆಟ್ಟು ಪರಿಸರದ ಉಳಿವಿಗೆ ಪ್ರತಿಯೊಬ್ಬರೂ ಒಂದೊಂದು ಗಿಡನೆಟ್ಟು ಸಹಕರಿಸಬೇಕು ಎಂದರು.

ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಎಸ್.ಆರ್. ತಿರುಮಲಯ್ಯ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಮತ್ತು ಸ್ವಯಂ ಸೇವಕರು ಪಾಲ್ಗೊಂಡಿದ್ದರು.