ನಾಪೆÇೀಕ್ಲು, ಜೂ. 11: ಅಕ್ರಮವಾಗಿ ಮನೆಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನಾಪೆÇೀಕ್ಲು ಪೆÇಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಠಾಣಾವ್ಯಾಪ್ತಿಯ ಬಲಮುರಿ ಕೂಡು ಪರಂಬು ಪೈಸಾರಿ ನಿವಾಸಿ ಸುರೇಶ್ ಬಂಧಿತ ಆರೋಪಿ. ಈತ ತನ್ನ ಮನೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ ಪೆÇಲೀಸರು ಮದ್ಯ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಕರ್ತವ್ಯಕ್ಕೆ ಅಡ್ಡಿ

ಈ ಸಂದರ್ಭದಲ್ಲಿ ಅಲ್ಲಿಯ ನಿವಾಸಿಗಳಾದ ಮನು, ಗಿರೀಶ್, ವಸಂತ್ ಎಂಬವರು ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳುವ ಸಂದರ್ಭ ಪೆÇಲೀಸರೊಂದಿಗೆ ಸಂಘರ್ಷ ನಡೆಸಿದ ಹಿನ್ನಲೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಮನು ಮತ್ತು ಗಿರೀಶ್‍ನನ್ನು ಪೆÇಲೀಸರು ಬಂಧಿಸಿದ್ದಾರೆ. ವಸಂತ್ ತಲೆ ಮರೆಸಿಕೊಂಡಿರುವದಾಗಿ ಪೆÇಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ವೆಂಕಟೇಶ್ ಅವರೊಂದಿಗೆ ಸಿಬ್ಬಂದಿಗಳಾದ ಮಹೇಶ್, ಬಷೀರ್ ಇದ್ದರು.