ಮೂರ್ನಾಡು, ಜೂ. 15: ಇಲ್ಲಿಗೆ ಸಮೀಪದ ಹೊದವಾಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ದಾಖಲಾತಿ ಆಂದೋಲನದ ‘ಶಾಲೆ ಕಡೆ ನಮ್ಮ ನಡೆ’ ಕಾರ್ಯಕ್ರಮದ ಅಂಗವಾಗಿ ಹೊದವಾಡ ಗ್ರಾಮದಲ್ಲಿ ಶಾಲಾ ಮಕ್ಕಳು ಘೋಷಣೆಗಳೊಂದಿಗೆ ಮೆರವಣಿಗೆ ನಡೆಸಿ ಜಾಗೃತಿ ಮೂಡಿಸಿದರು.

ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಕುಂಞÂ ಅಬ್ದುಲ್ಲಾ, ಸದಸ್ಯ ಯೂಸೂಫ್, ಶಾಲಾ ಮುಖ್ಯ ಶಿಕ್ಷಕಿ ಬಿ.ಕೆ. ಸರೋಜ ಹಾಗೂ ಸಿಬ್ಬಂದಿ ವರ್ಗದವರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.