ಮಡಿಕೇರಿ, ಜೂ. 11 : ಕರ್ನಾಟಕ ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್‍ನ ವೀಣಾ ಅಚ್ಚಯ್ಯ ಅವರು ಜೂ.13 ರಂದು ಸೋಮವಾರ ಬೆಳಿಗ್ಗೆ ಕೊಡಗು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ತಿಳಿಸಿದ್ದಾರೆ.

ತಾ. 13 ರಂದು ಬೆಳಿಗ್ಗೆ 10.30 ಗಂಟೆಗೆ ಕುಶಾಲನಗರ, 11.30 ಕ್ಕೆ ಸುಂಟಿಕೊಪ್ಪ ಹಾಗೂ ಮಧ್ಯಾಹ್ನ 12 ಗಂಟೆಗೆ ಮಡಿಕೇರಿಯ ಸುದರ್ಶನ ವೃತ್ತದ ಬಳಿ ಭವ್ಯ ಸ್ವಾಗತವನ್ನು ಕಾಂಗ್ರೆಸ್ ಕಾರ್ಯಕರ್ತರು ನೀಡಲಿದ್ದಾರೆ.

ನಂತರ ವೀಣಾ ಅಚ್ಚಯ್ಯ ಅವರು ಮಧ್ಯಾಹ್ನ 12.30 ಗಂಟೆಗೆ ಮಡಿಕೇರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರು ಹಾಗೂ ಪಕ್ಷದ ಪದಾಧಿಕಾರಿಗಳನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಲಿದ್ದಾರೆ. ಪಕ್ಷದ ಎಲ್ಲಾ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಮನವಿ ಮಾಡಿದ್ದಾರೆÉ.