ವೀರಾಜಪೇಟೆ, ಜೂ. 18: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವೀರಾಜಪೇಟೆ ಶಾಖೆಯ ವತಿಯಿಂದ ಈ ಬಾರಿಯ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ.ಯಲ್ಲಿ ಹೆಚ್ಚು ಅಂಕಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಜುಲೈ 7 ರಂದು ಅಪರಾಹ್ನ 2.30 ಗಂಟೆಗೆ ಸರ್ಕಾರಿ ನೌಕರರ ಭವನದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ನೌಕರರ ತಾಲೂಕು ಶಾಖೆಯ ಅಧ್ಯಕ್ಷ ಚೊಟ್ಟೆಂiÀiಂಡಮಾಡ ವಿಶ್ವನಾಥ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್ ಅವರು, ಎಸ್.ಎಸ್.ಎಲ್.ಸಿ.ಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಪಿಯುಸಿಯಲ್ಲಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದಲ್ಲಿಯೂ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ನೀಡಲಾಗುವದು. ಅರ್ಹ ಅಭ್ಯರ್ಥಿಗಳು ತಾ. 30 ರೊಳಗಾಗಿ ಸಂಘದ ಕಚೇರಿಗೆ ಅಂಕಪಟ್ಟಿಯನ್ನು ತಲಪಿಸುವಂತೆ ಕೋರಿದರು. ವಿದ್ಯಾರ್ಥಿಗಳ ಪೋಷಕರು ಯಾವ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ನಮೂದಿಸಬೇಕು ಎಂದು ಹೇಳಿದರು. ಹೆಚ್ಚಿನ ಮಾಹಿತಿಗಾಗಿ ಸಿ.ಎನ್. ವಿಶ್ವನಾಥ್ 9448856394 ದೂರವಾಣಿಯನ್ನು ಸಂಪರ್ಕಿಸಬಹುದಾಗಿದೆ.

ಗೋಷ್ಠಿಯಲ್ಲಿ ಉಪಾಧ್ಯಕ್ಷ ಮೊಗಪ್ಪ, ಸಂಘಟನಾ ಕಾರ್ಯದರ್ಶಿ ಸಿ.ಕೆ. ಭಾಗ್ಯಲಕ್ಷ್ಮಿ, ಕೆ.ಕೆ. ವೇಣುಗೋಪಾಲ್, ವಿ.ವಿ. ವಿಶ್ವನಾಥ್ ಉಪಸ್ಥಿತರಿದ್ದರು.