ವೀರಾಜಪೇಟೆ, ಜು. 23: ಪಟ್ಟಣದ ಕೊಡಗು ದಂತ ಮಹಾವಿದ್ಯಾಲಯ ಹಾಗೂ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಸ್ಟೂಡೆಂಟ್ ಆ್ಯಕ್ಟಿವಿಟಿ ಕ್ಲಬ್ ವತಿಯಿಂದ ಕಾಲೇಜಿನಲ್ಲಿ ಉಚಿತ ದಂತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಡಾ. ನೀತಾ ನೇತೃತ್ವದಲ್ಲಿ ಸುಮಾರು 10 ಕ್ಕೂ ಹೆಚ್ಚು ದಂತ ವೈದ್ಯರುಗಳು ಶಿಬಿರದಲ್ಲಿ ಭಾಗವಹಿಸಿದ್ದರು. ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಬಿರದ ಸದುಪಯೋಗ ಪಡೆದುಕೊಂಡರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ರೆ.ಫಾ. ಮದಲೈ ಮುತ್ತು, ಪದವಿ ಕಾಲೇಜಿನ ಪ್ರಾಂಶುಪಾಲ ರೆ.ಫಾ. ಟೆನ್ನಿ ಕುರಿಯನ್, ಉಪನ್ಯಾಸಕರಾದ ಹೇಮಂತ್, ವಿವೇಕ್, ಶರತ್ ಮತ್ತಿತರರು ಉಪಸ್ಥಿತರಿದ್ದರು.