ಸಿದ್ದಾಪುರ, ಜೂ. 12: ಇಲ್ಲಿನ ಗುಹ್ಯ ಅಗಸ್ತ್ಯೇಶ್ವರ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಮೀಪದ ಮಾರುಕಟ್ಟೆ ಬಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಿಸಲಾಯಿತು.

ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ ವಿತರಿಸಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಎಸ್. ವೆಂಕಟೇಶ್, ರಾಜ್ಯದಲ್ಲಿ ಈಗಾಗಲೇ ನೂರಾರು ಸರಕಾರಿ ಶಾಲೆಗಳು ಮುಚ್ಚಲಾಗಿದ್ದು, ಸರಕಾರಿ ಶಾಲೆಗಳಿಗೆ ಬಹುತೇಕ ಬಡ ಮಕ್ಕಳೇ ತೆರಳುತ್ತಾರೆ. ಹೀಗಾಗಿ ಸಹಕಾರ ಸಂಘದ ವತಿಯಿಂದ ಮಕ್ಕಳಿಗೆ ಉಪಯೋಗವಾಗಲು ಉಚಿತವಾಗಿ ನೋಟ್ ಪುಸ್ತಕ ನೀಡಲಾಗುತ್ತಿದ್ದು, ಮಕ್ಕಳು ಓದಿನ ಕಡೆ ಗಮನಹರಿಸಿ ಉತ್ತಮ ಅಂಕಗಳನ್ನು ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಈ ಸಂದರ್ಭ ಗ್ರಾ.ಪಂ ಸದಸ್ಯರಾದ ಶುಕೂರ್, ಪ್ರೇಮ, ಸಂಘದ ನಿರ್ದೇಶಕರುಗಳಾದ ಕೆ.ಎಸ್. ಸುನಿಲ್, ಹೆಚ್.ಕೆ. ಚೆಲುವಯ್ಯ, ಪಾರ್ವತಿ, ಕಾರ್ಯನಿರ್ವಹಣಾಧಿಕಾರಿ ಕೆ.ಬಿ. ಪ್ರಸನ್ನ, ಶಾಲೆಯ ಮುಖ್ಯೋಪಾಧ್ಯಾಯಿನಿ ಪ್ರೇಮ ಕುಮಾರಿ ಹಾಜರಿದ್ದರು. ಕಾರ್ಯಕ್ರಮವನ್ನು ಸಹ ಶಿಕ್ಷಕಿ ನಿರ್ಮಲÀ ಸ್ವಾಗತಿಸಿ, ರಾದಮ್ಮ ವಂದಿಸಿದರು.