ಸೋಮವಾರಪೇಟೆ, ಜೂ. 9: ಇಲ್ಲಿಗೆ ಸಮೀಪದ ಹಾನಗಲ್ಲು ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಮಿಥುನ್ ಅವರು ಹಾನಗಲ್ಲು ಗ್ರಾಮ ವ್ಯಾಪ್ತಿಯ 100ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳನ್ನು ವಿತರಿಸಿದರು.

ಹಾನಗಲ್ಲು ಅಂಗನವಾಡಿ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಪ್ರತಿಯೋರ್ವ ಮಕ್ಕಳು ಶೈಕ್ಷಣಿಕವಾಗಿ ಮುಂದೆ ಬರಬೇಕು. ಯಾವದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಶಾಲೆಗೆ ತೆರಳದೆ ಮನೆಯಲ್ಲಿಯೇ ಉಳಿಯುವ ಮಕ್ಕಳ ಬಗ್ಗೆಯೂ ಸಮಾಜ ಜಾಗ್ರತೆ ವಹಿಸಿ ಅವರಿಗೂ ಶಿಕ್ಷಣ ಕೊಡಿಸಲು ಮುಂದಾಗಬೇಕು. ಹಲವಷ್ಟು ಪೋಷಕರು ಬಡತನದಿಂದಾಗಿ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿಲ್ಲ. ಸರ್ಕಾರ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ನೆರವು ನೀಡುತ್ತಿದ್ದು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ರಮೇಶ್, ಚಂದ್ರಾವತಿ, ರೇವತಿ, ಪ್ರಮುಖರಾದ ರಾಮಕೃಷ್ಣ, ಮಣಿ, ಸುನಿಲ್, ಕೃಷ್ಣಪ್ಪ ಸೇರಿದಂತೆ ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.