ನಾಪೆÇೀಕ್ಲು, ಜು. 2: ಜಿಲ್ಲಾ ಉಸ್ತುವಾರಿ ಮತ್ತು ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವ ಎಂ.ಆರ್. ಸೀತಾರಾಮ್ ಜಿಲ್ಲೆಯ ಪ್ರಸಿದ್ಧ ಕ್ಷೇತ್ರಗಳಾದ ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಳ, ಎಮ್ಮೆಮಾಡು ಸೂಫಿ ಶಾಹಿದ್ ದರ್ಗಾ ಮತ್ತು ನಾಪೆÇೀಕ್ಲು ಬೇತು ಗ್ರಾಮದ ಮಕ್ಕಿ ಶ್ರೀ ಶಾಸ್ತಾವು ಸನ್ನಿಧಿಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ನಾಪೆÇೀಕ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು ಅಲ್ಲಿನ ಸಮಸ್ಯೆಗಳ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು.

ಮೊದಲಿಗೆ ಪಾಡಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ‘ಶಕ್ತಿ’ಯೊಂದಿಗೆ ಮಾತನಾಡಿದ ಸಚಿವರು ಕ್ಷೇತ್ರದ ಅಭ್ಯರ್ಥಿ ಬಿ.ಟಿ.ಪ್ರದೀಪ್ ಅವರೊಂದಿಗೆ ಈ ವಿಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವದು. ಗ್ರಾಮೀಣ ರಸ್ತೆಗಳು ಸೇರಿದಂತೆ ಈ ವ್ಯಾಪ್ತಿಯ ಎಲ್ಲಾ ರಸ್ತೆಗಳ ಅಭಿವೃದ್ಧಿಗೆ ಸಿದ್ದನಿದ್ದು, ಮಳೆಗಾಲ ಮುಕ್ತಾಯಗೊಳ್ಳುತ್ತಿದ್ದಂತೆ ಕಾಮಗಾರಿ ಆರಂಭಿಸಲು ವ್ಯವಸ್ಥೆ ಗೊಳಿಸಲಾಗುವದು ಎಂದು ಭರವಸೆ ನೀಡಿದರು.

ಪಾಡಿ ದೇವಳದ ಅಭಿವೃದ್ಧಿಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು ಇದು ಮುಜರಾಯಿ ಇಲಾಖೆಯ ದೇವಸ್ಥಾನ. ನಾನು ಮೊದಲ ಬಾರಿಗೆ ಭೇಟಿ ನೀಡಿದ್ದೇನೆ. ಅಭಿವೃದ್ಧಿ ಕಾರ್ಯಕ್ಕೆ ಸಂಬಂಧಿಸಿ ದಂತೆ ಯಾವದೇ ಮಾಹಿತಿಯಿಲ್ಲ ಎಂದರು. ಪಾಡಿ ದೇವಳದಲ್ಲಿ ದೇವಾಲಯ ಸಮಿತಿ ವತಿಯಿಂದ ಸಚಿವರನ್ನು ಶಾಲು ಹೊದಿಸಿ ಗೌರವಿಸಲಾಯಿತು. ಸಚಿವರೊಂದಿಗೆ ಕಾಂಗ್ರೆಸ್ ಮುಖಂಡ ಕದ್ದಣಿಯಂಡ ಹರೀಶ್ ಬೋಪಣ್ಣ, ಜಿಲ್ಲಾ ಕಾಂಗ್ರೆÉಸ್ ಅಧ್ಯಕ್ಷ ಟಿ.ಪಿ.ರಮೇಶ್, ಮಾಜಿ ಅಧ್ಯಕ್ಷ ಬಿ.ಟಿ.ಪ್ರದೀಪ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎಸ್. ತಮ್ಮಯ್ಯ, ಕಕ್ಕಬೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರ್ತಂಡ ಶೈಲಾ ಕುಟ್ಟಪ್ಪ, ಉಪಾಧ್ಯಕ್ಷ ಉಸ್ಮಾನ್, ಕಕ್ಕಬೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಚಮಂಡ ಲವ ಚಿಣ್ಣಪ್ಪ, ಮುಖಂಡರಾದ ಬಾಚಮಂಡ ರಾಜಾ ಪೂವಣ್ಣ, ಮಾಚೇಟಿರ ಕುಶು ಕುಶಾಲಪ್ಪ, ಕುಲ್ಲೇಟಿರ ಅರುಣ್ ಬೇಬ, ನಾಯಕಂಡ ಕುಂಞಣ್ಣ, ಅಪ್ಪಾರಂಡ ವಿಜು, ಉಪವಿಭಾಗಾಧಿಕಾರಿ ನಂಜುಂಡೇ ಗೌಡ, ತಹಶೀಲ್ದಾರ್ ಕುಂಞಮ್ಮ, ಕಂದಾಯ ಪರಿವೀಕ್ಷಕ ರಾಮಯ್ಯ ಮತ್ತಿತರರಿದ್ದರು.

ಆಸ್ಪತ್ರೆಗೆ ಭೇಟಿ; ಮಕ್ಕಿ ದೇವಳದಲ್ಲಿ ಪೂಜೆ ಸಲ್ಲಿಸಿ ಹಿಂತಿರುಗುವ ಸಂದರ್ಭ ನಾಪೆÇೀಕ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದ ಸಚಿವರು ಆಸ್ಪತ್ರೆಯ ಎಲ್ಲಾ ವಾರ್ಡ್‍ಗಳಿಗೂ ತೆರಳಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ವೈದ್ಯ ಡಾ|| ಜಗದೀಶ್ ಅವರಿಂದ ಸಮಸ್ಯೆಗಳ ಸಂಪೂರ್ಣ ಮಾಹಿತಿ ಪಡೆದ ನಂತರ ಮಾತನಾಡಿ, ತಜ್ಞ ವೈದ್ಯರ ನೇಮಕಾತಿ, ಸುತ್ತಲು ಆವರಣ ಗೋಡೆ, ಸಿಬ್ಬಂದಿ ನೇಮಕ, ಕಾವಲುಗಾರರ ನೇಮಕದೊಂದಿಗೆ ಎಲ್ಲಾ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವದು ಎಂದು ಭರವಸೆ ನೀಡಿದರು.

ಮಕ್ಕಿ ದೇವಳ: ಮಕ್ಕಿ ಶ್ರೀ ಶಾಸ್ತಾವು ಸನ್ನಿಧಿಯಲ್ಲಿ ಸಚಿವರು ಪೂಜೆ ಸಲ್ಲಿಸಿದರು. ನಂತರ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಕುಟ್ಟಂಜ್ಜೆಟ್ಟಿರ ಶ್ಯಾಮ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥರು ಶಾಸ್ತಾವು ದೇವಳದ ಸಮುದಾಯ ಭವನವನ್ನು ಅಭಿವೃದ್ಧಿ ಪಡಿಸಬೇಕು ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲ ವಾಗುವಂತೆ ನೀರಿನ ಟ್ಯಾಂಕ್ ನಿರ್ಮಿಸಬೇಕು. ದೇವಾಲಯದ ಮುಂಭಾಗದಲ್ಲಿ ತಡೆಗೋಡೆಯನ್ನು ನಿರ್ಮಿಸಬೇಕು. ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದರು. ಅಗತ್ಯ ಕಾಮಗಾರಿಗಳಿಗೆ ಸಂಬಂಧಿಸಿದ ನೀಲಿ ನಕ್ಷೆ ತಯಾರಿಸಿ ಕಳುಹಿಸಿ ಕೊಟ್ಟಲ್ಲಿ ಸೂಕ್ತ ಕ್ರಮ ಕೈಗೊಳ್ಳುವದಾಗಿ ಉಸ್ತುವಾರಿ ಸಚಿವರು ಭರವಸೆ ನೀಡಿದರು. ಈ ಸಂರ್ಭದಲ್ಲಿ ದೇವಾಲಯ ಆಡಳಿತ ಸಮಿತಿ, ಗ್ರಾಮಸ್ಥರು, ಪಕ್ಷದ ಮುಖಂಡರು ಇದ್ದರು.