ಮಡಿಕೇರಿ, ಆ. 14: ಇಂದಿನ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ಹೆಚ್ಚು ತೊಡಗಿಸಿಕೊಳ್ಳುತ್ತಿರುವದರಿಂದ ಶೈಕ್ಷಣಿಕ ಜೀವನದಲ್ಲಿ ಯಶಸ್ಸನ್ನು ಸಾಧಿಸದೆ ವೈಫಲ್ಯತೆಯನ್ನು ಕಾಣುತ್ತಿದ್ದಾರೆ ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ರಾಷ್ಟ್ರ ಪ್ರಶಸ್ತಿ ವಿಜೇತ ಅಧಿಕಾರಿ ಡಾ. ಬಿ.ಎ. ಕುಮಾರ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ನಡೆದ ಎನ್‍ಎಸ್‍ಎಸ್‍ನ ವಾರ್ಷಿಕ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅರ್ಥಶಾಸ್ತ್ರ ವಿಭಾಗದ ಸಂಯೋಜಕರಾದ ಟಿ.ಡಿ. ತಿಮ್ಮಯ್ಯ ಮಾತನಾಡಿ ವಿದ್ಯಾರ್ಥಿಗಳು ದೇಶದ ಆದರ್ಶ ವ್ಯಕ್ತಿಗಳಾಗಬೇಕೆಂದು ಕರೆ ನೀಡಿದರು. ಎನ್‍ಎಸ್‍ಎಸ್ ಹಿಂಜರಿಕೆ ಯನ್ನು ಬಿಟ್ಟು ಮುನ್ನುಗ್ಗುವ ಪಾಠ ವನ್ನು ಕಲಿಸುವ ವೇದಿಕೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಎನ್‍ಎಸ್‍ಎಸ್ ಘಟಕದ ವಿದ್ಯಾರ್ಥಿ ಗಳಿಗೆ ಪ್ರತಿಜ್ಞಾವಿಧಿ ಬೋಧಿಸ ಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಡಾ. ಪಾರ್ವತಿ ಅಪ್ಪಯ್ಯ, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಜಗತ್ ತಿಮ್ಮಯ್ಯ, ಎಂ.ಬಿ.ಎ ಸಂಯೋಜಕಿ ಗಾಯತ್ರಿದೇವಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.