ವೀರಾಜಪೇಟೆ, ನ.28 : ಕೇಂದ್ರದ ನರೇಂದ್ರಮೋದಿ ನೇತೃತ್ವದ ಬಿ.ಜೆ.ಪಿ.ಸರಕಾರದ ರೂ.500 ಹಾಗೂ 1000 ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿ ದೇಶದ ಜನತೆಯನ್ನು ಅಭೂತಪೂರ್ವ ಸಂಕÀಷ್ಟಕ್ಕೆ ತಳ್ಳಿದ ಕ್ರಮವನ್ನು ಖಂಡಿಸಿ ರಾಷ್ಟ್ರವ್ಯಾಪಿ ಪ್ರತಿಭಟನೆಯ ಅಂಗವಾಗಿ ವೀರಾಜಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು “ಆಕ್ರೋಶ ದಿನಾಚರಣೆ” ನಡೆಸಿದರು. ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರು ಸ್ಥಳೀಯ ಗಡಿಯಾರ ಕಂಬದ ಬಳಿ ಪ್ರತಿಭಟನಾ ಧರಣಿ ಕುಳಿತರು. ನಂತರ ಮೆರವಣಿಗೆಯಲ್ಲಿ ಸಾಗಿದ ಕಾರ್ಯ ಕರ್ತರು ತಾಲೂಕು ದಂಡಾಧಿಕಾರಿ ತಹಶೀಲ್ದಾರ್‍ರವರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಪತ್ರವೊಂದನ್ನು ಸಲ್ಲಿಸಿದರು . ಪ್ರತಿಭಟನಾಕಾರರನ್ನು ಉದ್ದೇಶಿಸಿ

(ಮೊದಲ ಪುಟದಿಂದ) ಮಾತನಾಡಿದ ಜಿಲ್ಲಾ ಕಾಂಗ್ರೆಸ್‍ನ ಪ್ರಬಾರ ಅಧ್ಯಕ್ಷ ಟಿ.ಪಿ.ರಮೇಶ್‍ರವರು “ನೋಟು ರದ್ಧತಿಯಿಂದಾಗಿ ದೇಶದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಜಾರಿಗೊಂಡಿದ್ದು. ಕೂಡಲೇ ಸರಕಾರವು ಸಾಮಾನ್ಯ ಜನರ ನೋವಿಗೆ ಸ್ಪಂದಿಸಬೇಕು.” ಎಂದು ಹೇಳಿದರು. ಮಾಜೀ ಕಾಂಗ್ರೆಸ್ ಅಧ್ಯಕ್ಷ ಬಿ.ಟಿ.ಪ್ರದೀಪ್ , ಜಿಲ್ಲಾ ಪಂಚಾಯತ್ ಸದಸ್ಯೆ ಸರಿತಾ ಪೂಣಚ್ಚ, ವಿಧಾನ ಪರಿಷತ್ ಮಾಜೀ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಕೆ.ಅಬ್ದುಸ್ಸಲಾಂ, ಉಪಾಧ್ಯಕ್ಷ ಬೆಲ್ಲು ಬೋಪಯ್ಯ, ಜಿಲ್ಲಾ ಕಾಂಗ್ರೆಸ್ ಕಾನೂನು ವಿಭಾಗದ ಅಧ್ಯಕ್ಷ ಡಿ.ಸಿ.ದ್ರುವಕುಮಾರ್ , ಹಿಂದುಳಿದ ವರ್ಗ ವಿಭಾಗದ ಜಿಲ್ಲಾಧ್ಯಕ್ಷ ಸರ ಚಂಗಪ್ಪ, ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾಧ್ಯಕ್ಷ ವಿ.ಕೆ.ಸತೀಶ್ ಕುಮಾರ್, ಉಸ್ಮಾನ್ ಹಾಜಿ, ಅರವಿಂದ ಕುಟ್ಟಪ್ಪ, ನರೇಂದ್ರಕಾಮತ್ ಕಾಂಗ್ರೆಸ್ ಸೇವಾದಳದ ಜಿಲ್ಲಾ ಸಮಿತಿಯ ಸಿ.ಪಿ.ಕಾವೇರಪ್ಪ, ಎಂ.ಎಲ್. ಸೈನುದ್ದೀನ್, ಜಿ.ಜಿ. ಮೋಹನ್ ಮರ್ವಿನ್‍ಲೋಬೋ ಪೃಥ್ವಿನಾಥ್ ಮುಂತಾದವರು ಪಾಲ್ಗೊಂಡಿದ್ದರು.