ಮಡಿಕೇರಿ, ಆ. 7: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘಕ್ಕೆ ಎ.ಬಿ.ವಿ.ಪಿ. ಕಾರ್ಯಕರ್ತರು ಆಯ್ಕೆಯಾಗಿದ್ದಾರೆ. ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ತೃತೀಯ ಬಿ.ಎ. ವಿದ್ಯಾರ್ಥಿ ಶರತ್ ಕುಮಾರ್, ಉಪಾಧ್ಯಕ್ಷರಾಗಿ ತೃತೀಯ ಬಿ.ಎ. ವಿದ್ಯಾರ್ಥಿನಿ ಕೆ.ಆರ್. ಸುಷ್ಮಾ, ಕಾರ್ಯದರ್ಶಿಯಾಗಿ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಮೋನಿಷಾ ಎ, ಸಹಕಾರ್ಯದರ್ಶಿಯಾಗಿ ದ್ವಿತೀಯ ಬಿ.ಎಸ್.ಡಬ್ಲೂ. ವಿದ್ಯಾರ್ಥಿ ಕೆ.ಆರ್. ನಿಶಾಂತ್, ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಸೌಮ್ಯ, ಸಾಂಸ್ಕøತಿಕ ಕಾರ್ಯದರ್ಶಿಯಾಗಿ ದ್ವಿತೀಯ ಬಿ.ಕಾಂ ವಿದ್ಯಾರ್ಥಿಗಳಾದ ಟಿ.ಡಿ. ಮನೋಜ್ ಮತ್ತು ಕಾವೇರಮ್ಮ, ಹಾಗೂ ಕ್ರೀಡಾ ಕಾರ್ಯದರ್ಶಿಯಾಗಿ ತೃತೀಯ ಬಿ.ಕಾಂ ವಿದ್ಯಾರ್ಥಿಗಳಾದ ಹೆಚ್.ಬಿ. ಜೀವನ್ ಮತ್ತು ಹಿಮ ಜಿಯಾರ್ಗೆ ಆಯ್ಕೆಯಾಗಿದ್ದಾರೆ. ಇವರನ್ನು ಎ.ಬಿ.ವಿ.ಪಿ. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿದ್ದರಾಜು, ಹಳೇ ವಿದ್ಯಾರ್ಥಿ ಧನಂಜಯ ಸೇರಿದಂತೆ ಇತರರು ಅಭಿನಂದಿಸಿದ್ದಾರೆ.