ಸೋಮವಾರಪೇಟೆ, ಮೇ 24: ಪಟ್ಟಣ ಪಂಚಾಯಿತಿ ವತಿಯಿಂದ ಶಾಸಕರ ಅನುದಾನದಡಿ ನಗರದ ಜೇಸೀ ವೇದಿಕೆ ಬಳಿ ರೂ. 10 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಿದರು.

5 ರೂಪಾಯಿಗೆ 20 ಲೀಟರ್ ಹಾಗೂ ಎರಡು ರೂಪಾಯಿಗೆ 1 ಲೀಟರ್ ತಂಪಾದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಯಿಂದ ನಗರ ವ್ಯಾಪ್ತಿಯ ಸಾರ್ವಜನಿಕರು, ಹೊರ ಭಾಗದಿಂದ ಆಗಮಿಸುವವರು ಹಾಗೂ ಪ್ರವಾಸಿಗರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ರಂಜನ್ ಹೇಳಿದರು.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಜಿ.ಪಂ. ಅಧ್ಯಕ್ಷ ಹರೀಶ್, ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್,ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮಿ ಸುರೇಶ್, ಸ್ಥಾಯಿ ಸಮಿತಿ ಅಧ್ಯಕ್ಷೆ ಸುಶೀಲ, ಸದಸ್ಯರಾದ ಲೀಲಾ ನಿರ್ವಾಣಿ, ಸುರೇಶ್, ಶೀಲಾ ಡಿಸೋಜ, ವೆಂಕಟೇಶ್, ಇಂದ್ರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.