ಮಡಿಕೇರಿ, ಜ.12: ವೀರಸೇನಾನಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಜನ್ಮ ದಿನಾಚರಣೆಯನ್ನು ತಾ. 28 ರಂದು ಜಿಲ್ಲಾಡಳಿತ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಬಿ.ಎಸ್.ತಮ್ಮಯ್ಯ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನವನ್ನು ತಾ.28 ರಂದು ನಗರದ ಕೋಟೆಯಲ್ಲಿ ಅರ್ಥ ಪೂರ್ಣವಾಗಿ ಆಚರಿಸುವಂತಾಗ ಬೇಕು ಎಂದು ಸಲಹೆ ಮಾಡಿದರು.
ಕಳೆದ ಬಾರಿ ಜಿಲ್ಲಾಡಳಿತ ಹಾಗೂ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಕಾರ್ಯಕ್ರಮ ಆಯೋಜಿಲಾಗಿತ್ತು, ಈ ಬಾರಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಜನ್ಮ ದಿನಾಚರಣೆಗೆ ಸರ್ಕಾರ ಮೊದಲೇ ಅನುದಾನ ಬಿಡುಗಡೆಗೆ ಒಪ್ಪಿಗೆ ನೀಡಿರುವದರಿಂದ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸು ವಂತಾಗಬೇಕು ಎಂದು ಸಲಹೆ ಮಾಡಿದರು.
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಫೋರಂ ಅಧ್ಯಕ್ಷ ಕರ್ನಲ್ ಸುಬ್ಬಯ್ಯ ಅವರು ಮಾತನಾಡಿ, ಶಿಸ್ತು ಹಾಗೂ ದೇಶಭಕ್ತಿಗೆ ಹೆಸರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮ ದಿನಾಚರಣೆ ಯನ್ನು ಅವರ ಆಶಯದಂತೆ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ, ಸಂಸ್ಕøತಿ ಬಿಂಬಿಸುವ ಕಲಾ ತಂಡಗಳ ಮೆರವಣಿಗೆ ಆಯೋಜಿಸ ಬೇಕು,
(ಮೊದಲ ಪುಟದಿಂದ) ಹಾಗೆಯೇ ಎನ್ಸಿಸಿ ಕೇಡೆಟ್ಗಳನ್ನು ಆಹ್ವಾನಿಸುವಂತಾಗಬೇಕು ಎಂದು ಕರ್ನಲ್ ಸುಬ್ಬಯ್ಯ ಹೇಳಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣ ವಾಗಿ ಹಾಗೂ ವ್ಯವಸ್ಥಿತವಾಗಿ ಆಯೋಜನೆ ಮಾಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ನಿರ್ದೇಶನ ನೀಡಿದರು.
ಪ್ರಮೋದ್ ಸೋಮಯ್ಯ ಮಾತನಾಡಿ, ವಿದ್ಯಾರ್ಥಿಗಳಿಗೆ ಸೇನೆಯ ಮಹತ್ವ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಶಿಸ್ತನ್ನು ತಿಳಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬೊಮ್ಮೇಗೌಡ ಅವರು, ತಾಲೂಕು ಮಟ್ಟದಲ್ಲಿ ಸ್ಪರ್ಧಾ ಕಾರ್ಯಕ್ರಮ ಆಯೋಜಿಸುವಂತಾಗಲು ಡಿಡಿಪಿಐ ಅವರ ಗಮನಕ್ಕೆ ತರಲಾಗುವದು ಎಂದು ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ರಾಷ್ಟ್ರಗೀತೆ, ದೇಶಭಕ್ತಿ, ದೇಶಪ್ರೇಮ ಗೀತೆಗಳ ಸ್ಪರ್ಧೆಯನ್ನು ತಾ.27 ರಂದು ಏರ್ಪಡಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಬಳಿಕ ಬಿ.ಎಸ್.ತಮ್ಮಯ್ಯ ಅವರು ಮಾಜಿ ಸೈನಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಹ್ವಾನಿಸುವಂತೆ ಸೈನಿಕ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಿಗೆ ಸಲಹೆ ಮಾಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್, ಪ್ರಮುಖರಾದ ಉಳ್ಳಿಯಡ ಎಂ.ಪೂವಯ್ಯ, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಗೀತಾ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸಿ.ಜಗನ್ನಾಥ್ ಅವರು ಹಲವು ಮಾಹಿತಿ ನೀಡಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಎಲ್.ಎನ್.ಕುಳ್ಳಯ್ಯ, ಮಣಜೂರು ಮಂಜುನಾಥ್, ಗೀತಾ, ವಿವಿಧ ಇಲಾಖೆಯ ಅಧಿಕಾರಿಗಳು ಇತರರು ಇದ್ದರು.