ಮಡಿಕೇರಿ, ಜ. 29: ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್, ಹಾಲಿ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಹಾಗೂ ಕುಂತಿ ಬೋಪಯ್ಯ ಅವರ ಜ್ಯೇಷ್ಠ ಪುತ್ರಿ ಪ್ರಜ್ಞಾ ಮತ್ತು ಬೆಂಗಳೂರಿನ ನಿವಾಸಿ ಚೆಟ್ಟಿಮಾಡ ಪ್ರಭಾ ಮತ್ತು ದಿ. ಕಾರ್ಯಪ್ಪ ಅವರ ಪುತ್ರ ವೈಭವ ಅವರ ವಿವಾಹ ಮಡಿಕೇರಿ ನಗರದ ಕ್ರಿಸ್ಟಲ್ ಹಾಲ್‍ನಲ್ಲಿ ಇಂದು ನಡೆಯಿತು.ವಿವಾಹ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹಾಗೂ ಪತ್ನಿ ಡಾಟಿ, ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ಉಪನಾಯಕ ಆರ್. ಅಶೋಕ್, ಮಾಜಿ ಸಚಿವರಾದ ವಿ. ಸೋಮಣ್ಣ, ವಿಶ್ವೇಶ್ವರ ಹೆಗಡೆ ಕಾಗೇರಿ, ಅಂಬರೀಷ್, ಸಿ.ಟಿ. ರವಿ, ಸುರೇಶ್ ಕುಮಾರ್, ಹೆಚ್.ಡಿ. ರೇವಣ್ಣ, ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಸಂಸದ ಪ್ರತಾಪಸಿಂಹ, ಮಾಜಿ ಸಂಸದೆ ತೇಜಸ್ವಿನಿ ರಮೇಶ್ ಹಾಗೂ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.