ಮಡಿಕೇರಿ, ಅ.30 :ನಗರಸಭೆಯ ಸ್ಥಾಯಿ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯದೆ ಇರುವದಕ್ಕೆ ಕಾಂಗ್ರೆಸ್ ಆಡಳಿತ ಹಾಗೂ ಪೌರಾಯುಕ್ತರೆ ನಿರ್ಲಕ್ಷ್ಯ ದೋರಣೆಯೇ ಕಾರಣವೆಂದು ನಗರಸಭೆÉಯ ಬಿಜೆಪಿ ಸದಸ್ಯರು ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿಯ ಹಿರಿಯ ಸದಸ್ಯ ಕೆ.ಎಸ್. ರಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷರ ಅಧಿಕಾರವಧಿ ಪೂರ್ಣಗೊಂಡು ಒಂದು ತಿಂಗಳು ಕಳೆದಿದ್ದರೂ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸದೆ ಪೌರಾಯುಕ್ತರು ಹಾಗೂ ಕಾಂಗ್ರೆಸ್ ಆಡಳಿತದ ಪ್ರಮುಖರು ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ ಎಂದು ಆರೋಪಿಸಿದರು. ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಕಾನೂನು ಹೋರಾಟ ನಡೆಸುವದಾಗಿ ಎಚ್ಚರಿಕೆ ನೀಡಿದರು.

ಇದೇ ಸೆ.30 ರಂದು ಸ್ಥಾಯಿ ಸಮಿತಿ ಅಧ್ಯಕ್ಷರ ಅಧಿಕಾರವಧಿ ಪೂರ್ಣಗೊಂಡಿದ್ದು, ಇಲ್ಲಿಯವರೆಗೆ ನೂತನ ಅಧ್ಯಕ್ಷರ ಆಯ್ಕೆಯ ಬಗ್ಗೆ ಯಾವದೇ ಕ್ರಮ ಕೈಗೊಂಡಿಲ್ಲ. ಒಂದು ತಿಂಗಳೊಳಗೆ ಅಧ್ಯಕ್ಷರ ಆಯ್ಕೆಯಾಗ ಬೇಕೆನ್ನುವ ನಿಯಮವಿದ್ದರೂ ಇದನ್ನು ಉಲ್ಲಂಘಿಸಿರುವ ಬಗ್ಗೆ ಜಿಲ್ಲಾಧಿಕಾರಿ ಗಳ ಗಮನಕ್ಕೆ ತರಲಾಗುತ್ತದೆ ಎಂದ ಅವರು, ಕಾನೂನು ಹೋರಾಟದ ಎಚ್ಚರಿಕೆ ನೀಡಿದರು.

ಎಸ್‍ಎಫ್‍ಸಿ ಅನುದಾನ ಸೇರಿದಂತೆ ಪ್ರತಿವರ್ಷ ಎಂದಿನಂತೆ ಬರುತ್ತಿರುವ ಅನುದಾನ ನಗರಸಭೆಗೆ ಬಿಡುಗಡೆಯಾಗುತ್ತಿದೆಯೇ ಹೊರತು, ಕಾಂಗ್ರೆಸ್ ಪ್ರಯತ್ನದಿಂದ ಯಾವದೇ ವಿಶೇಷ ಅನುದಾನ ಲಭ್ಯವಾಗುತ್ತಿಲ್ಲ ವೆಂದರು. ಆಡಳಿತ ವ್ಯವಸ್ಥೆ ಅಧ್ಯಕ್ಷರ ಬದಲಿಗೆ ಸದಸ್ಯರೊಬ್ಬರ ಹಿಡಿತದಲ್ಲಿದ್ದು, ಸಂಪೂರ್ಣ ನಿರ್ಜೀವವಾಗಿದೆ ಎಂದು ದೂರಿದರು.

ಎಲ್ಲೆಂದರಲ್ಲಿ ಮಾಂಸದ ಅಂಗಡಿಗಳು ನಿಯಮ ಉಲ್ಲಂಘಿಸಿ ಆರಂಭಗೊಳ್ಳುತ್ತಿದ್ದು, ನಗರಸಭೆ ಯಾವದೇ ಕ್ರಮ ಕೈಗೊಳ್ಳುತ್ತಿಲ್ಲವೆಂದ ಅವರು ಲೈಸೆನ್ಸ್ ಇಲ್ಲದ ಅಂಗಡಿಗಳನ್ನು ತಕ್ಷಣ ಮುಚ್ಚಬೇಕೆಂದು ಒತ್ತಾಯಿಸಿದರು.

ಸದಸ್ಯ ಪಿ.ಡಿ. ಪೊನ್ನಪ್ಪ ಮಾತನಾಡಿ, 4ನೇ ಹಣಕಾಸು ಆಯೋಗದ ಅಧ್ಯಕ್ಷರು ನಗರಸಭೆಗೆ ಭೇಟಿ ನೀಡಿದ್ದ ಸಂದರ್ಭ ಪೌರಾಯುಕ್ತರು ಹಾಗೂ ಅಧ್ಯಕ್ಷರು ಆದಾಯ ಸಂಗ್ರಹದ ಕುರಿತು ತಪ್ಪು ಮಾಹಿತಿಯನ್ನು ನೀಡಿದ್ದಾರೆ ಎಂದು ಆರೋಪಿಸಿದರು. ಹೆಚ್ಚಿನ ಅನುದಾನದ ಬೇಡಿಕೆಯನ್ನು ಸಲ್ಲಿಸಲಾಗಿದೆಯಾ ದರೂ, ಬೇಡಿಕೆಯ ಮನವಿ ಪತ್ರ ಸಿದ್ಧಪಡಿಸುವಾಗ ಸರ್ವ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ್ಲ. ನಾಲ್ಕು ಗೋಡೆಗಳ ಮಧ್ಯೆ ಪೌರಾಯುಕ್ತರು ಹಾಗೂ ಅಧ್ಯಕ್ಷರು ತಮಗಿಷ್ಟ ಬಂದಂತೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ.

ಆಡಳಿತ ವ್ಯವಸ್ಥೆ ಕುಸಿದಿದೆ. ರಾಜಾಸೀಟು ಭಾಗದಲ್ಲಿ ರÀಸ್ತೆ ಬದಿ ಗೂಡಂಗಡಿ ವ್ಯಾಪಾರಸ್ಥರ ಸಂಖ್ಯೆ ಹೆಚ್ಚಾಗಿದ್ದು, ನಗರಸಭೆ ಇದಕ್ಕೆ ಕಡಿವಾಣ ಹಾಕುತ್ತಿಲ್ಲ. ಇದರಿಂದಾಗಿ ರಾಜಾಸೀಟು ರಸ್ತೆಯಲ್ಲಿ ಸಂಪೂರ್ಣ ವಾಗಿ ವಾಹನ ದಟ್ಟಣೆಯಿಂದ ವಾಹನಗಳ ಸಂಚಾರಕ್ಕೆ ಅಡಚಣೆ ಯುಂಟಾಗುತ್ತಿದೆ ಯೆಂದು ಪಿ.ಡಿ. ಪೆÀÇನ್ನಪ್ಪ ಅಸಮಾಧಾನ ವ್ಯಕ್ತಪಡಿಸಿದರು.

ಉಪಾಧ್ಯಕ್ಷ ಟಿ.ಎಸ್. ಪ್ರಕಾಶ್ ಮಾತನಾಡಿ, 4ನೇ ಹಣಕಾಸು ಆಯೋಗದ ಅಧ್ಯಕ್ಷರು ಲೆಕ್ಕಪತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದರು. ಲೆಕ್ಕಪತ್ರದಲ್ಲಿ ಸಂಪೂರ್ಣ ತಪ್ಪು ಮಾಹಿತಿಗಳಿದೆ ಎಂದರು. ಅಭಿವೃದ್ಧಿ ವಿಚಾರದಲ್ಲಿ ಸಂಪೂರ್ಣ ಸಹಕಾರ ನೀಡುವದಾಗಿ ತಿಳಿಸಿದ್ದರೂ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲವೆಂದು ಆರೋಪಿಸಿದರು. ಯಾವದೇ ವೈಯಕ್ತಿಕ ತೀರ್ಮಾನಗಳಿಗೆ ಬೆಂಬಲ ನೀಡುವದಿಲ್ಲವೆಂದು ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸದಸ್ಯರಾದ ಉಣ್ಣಿಕೃಷ್ಣನ್, ಅನಿತಾ ಪೂವಯ್ಯ ಹಾಗೂ ಶಿವಕುಮಾರಿ ಉಪಸ್ಥಿತರಿದ್ದರು.