ಮಡಿಕೇರಿ, ಜೂ.2 :ಕೊಡಗು ಬ್ಯಾರೀಸ್ ವೆಲ್¥sóÉೀರ್ ಟ್ರಸ್ಟ್‍ನ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ.4 ರಂದು ನಗರದ ಕ್ರೆಸೆಂಟ್ ಶಾಲೆಯಲ್ಲಿ ನಡೆಯಲಿದೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಬಿ.ಎ.ಷಂಶುದ್ದೀನ್ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಸಂಸ್ಥೆಗೆ ಒಂದು ವರ್ಷ ತುಂಬಿರುವ ಈ ಸಂದರ್ಭದಲ್ಲಿ ಸಂಸ್ಥೆಯ ವಾರ್ಷಿಕೋತ್ಸವ ಆಚರಣೆಯೊಂದಿಗೆ ಶಿಕ್ಷಣದಲ್ಲಿ ವಿಶೇಷ ಸಾಧನೆ ಮಾಡಿದ ಜಿಲ್ಲೆಯ ಬ್ಯಾರಿ ವಿದ್ಯಾರ್ಥಿಗಳನ್ನು ಪುರಸ್ಕರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬಿ.ಕಾಂ. ಪದವಿಯಲ್ಲಿ ಅಕೌಂಟೆನ್ಸಿ ವಿಷಯದಲ್ಲಿ ಶೇ.100 ಅಂಕಗಳನ್ನು ಗಳಿಸಿ ಮಂಗಳೂರು ವಿವಿಯಿಂದ ಚಿನ್ನದ ಪದಕ ಪಡೆದುಕೊಂಡ ಮಡಿಕೇರಿ ಫೀ.ಮಾ. ಕಾರ್ಯಪ್ಪ ಕಾಲೇಜಿನ ಕು|| ಶರಾಫತ್ ಸನಾ ಹಾಗೂ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಫೆಲೋಶಿಪ್‍ಗೆ ಆಯ್ಕೆಯಾದ ಕು|| ಫಹಿಮಾ ರಹಿಮಾನ್ ಇವರುಗಳನ್ನು ಸನ್ಮಾನಿಸಲಾಗುವುದು. ಬ್ಯಾರಿ ಭಾಷಾ ದಿನಾಚರಣೆ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರುಗಳಿಗೆ ಇದೇ ಸಂದರ್ಭದಲ್ಲಿ ಬಹುಮಾನಗಳನ್ನು ವಿತರಿಸಲಾಗುವದು.

ಕ್ರೆಸೆಂಟ್ ಶಾಲೆಯ ಸಭಾಂಗಣ ದಲ್ಲಿ ನಡೆಯುವ ಕಾರ್ಯಕ್ರಮವನ್ನು ಸ್ಥಳೀಯ ದೃಶ್ಯವಾಹಿನಿ ಚಿತ್ತಾರದ ಸಂಪಾದಕಿ ಸವಿತಾ ರೈ ಉದ್ಘಾಟಿಸುವರು. ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಮನ್ಸೂರ್ ಹಾಗೂ ಸದಸ್ಯ ಅಮೀನ್ ಮೊಹಿಸಿನ್ ಪುರಸ್ಕಾರಗಳನ್ನು ಪ್ರದಾನ ಮಾಡುವರು. ಕ್ರೆಸೆಂಟ್ ಶಾಲೆಯ ಮುಖ್ಯ ಶಿಕ್ಷಕಿ ತಲತ್ ಅಂಜುಮ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು.

ಕೊಡಗಿನಲ್ಲಿರುವ ಬ್ಯಾರಿ ಮಕ್ಕಳು ಮತ್ತು ಯುವಜನರಿಗೆ ಸಾಹಿತ್ಯ, ಸಂಸ್ಕೃತಿ, ಕ್ರೀಡೆ, ಪರಿಸರ ಇತ್ಯಾದಿ ವಿಷಯಗಳಲ್ಲಿ ಸಾಮಥ್ರ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಹಾಗೂ ಯುವ ಜನರಲ್ಲಿ ರಾಷ್ಟ್ರೀಯ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಲು ಕೊಡಗು ಬ್ಯಾರೀಸ್ ವೆಲ್‍ಫೇರ್ ಟ್ರಸ್ಟ್‍ನ್ನು ಸ್ಥಾಪಿಸಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕಾರ್ಯಕ್ರಮಗಳನ್ನು ಆಯೋಜಿಸ ಲಾಗುವದೆಂದು ಷಂಶುದ್ದೀನ್ ತಿಳಿಸಿದರು.

ಇತ್ತೀಚೆಗೆ ನಡೆದ ಪಂಚಭಾಷಾ ಅಕಾಡೆಮಿಗಳ ಸಮ್ಮಿಲನ ಕಾರ್ಯಕ್ರಮ ಅತ್ಯಂತ ಉತ್ತಮ ಪ್ರಯತ್ನವಾಗಿದ್ದು, ಎಲ್ಲರ ಮನಸ್ಸುಗಳನ್ನು ಬೆಸೆಯುವ ಇಂಥ ಕಾರ್ಯಕ್ರಮಗಳನ್ನು ಆಯೋಜಿಸಲು ಟ್ರಸ್ಟ್ ಕೂಡ ಮುಂದಾಗಲಿದೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್‍ನ ಖಜಾಂಚಿ ಅಹಮ್ಮದ್ ಕಬೀರ್ ಹಾಗೂ ಸಂಪರ್ಕಾಧಿಕಾರಿ ರಫೀಕ್ ಅಹಮ್ಮದ್ ಉಪಸ್ಥಿತರಿದ್ದರು.