ಸೋಮವಾರಪೇಟೆ,ಜೂ.3: ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ವರ್ಷಂಪ್ರತಿ ನಡೆಯುತ್ತಿರುವ ಜಿಲ್ಲಾ ಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟದ ರೋಲಿಂಗ್ ಪಾರಿತೋಷಕವನ್ನು ಈ ಸಾಲಿನ ಆತಿಥೇಯ ವಹಿಸಿ ಕೊಂಡಿರುವ ಸೋಮವಾರಪೇಟೆ ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಹಸ್ತಾಂತರಿಸ ಲಾಯಿತು.

ಸೋಮವಾರಪೇಟೆ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ತಾ. 5 ರಂದು ಕ್ರಿಕೆಟ್ ಪಂದ್ಯಾಟ ನಡೆಯಲಿದ್ದು, ಕಳೆದ ಸಾಲಿನಲ್ಲಿ ಪರ್ಯಾಯ ಪಾರಿತೋಷಕವನ್ನು ಪಡೆದಿದ್ದ ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ಪದಾಧಿಕಾರಿಗಳು ಇಲ್ಲಿನ ಪತ್ರಿಕಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಸ್ತಾಂತರಿಸಿದರು. ಈ ಸಂದರ್ಭ ಕ್ರೀಡಾ ಸಮಿತಿ ಅಧ್ಯಕ್ಷ ಪಾರ್ಥ ಚಿಣ್ಣಪ್ಪ, ಕ್ರೀಡಾ ಸಮಿತಿಯ ಸಂಚಾಲಕ ಎಸ್.ಎ.ಮುರಳೀಧರ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ತೇಲಪಂಡ ಕವನ್ ಕಾರ್ಯಪ್ಪ, ಕಾರ್ಯದರ್ಶಿ ಬಿ.ಎ.ಭಾಸ್ಕರ್, ಉಪಾಧ್ಯಕ್ಷ ಡಿ.ಪಿ.ಲೋಕೇಶ್ ಉಪಸ್ಥಿತರಿದ್ದರು.