ಮಡಿಕೇರಿ, ಮೇ 24: ಅರಣ್ಯ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಹೊಟೇಲ್, ರೆಸಾರ್ಟ್ ಮತ್ತು ರೆಸ್ಟೋರೆಂಟ್ ಸಂಘದ ಸಹಯೋಗದೊಂದಿಗೆ ಕೊಡಗು ಜಿಲ್ಲೆಯ ಕುಶಾಲನಗರ ಬಳಿಯ ಕಾವೇರಿ ನಿಸರ್ಗಧಾಮದಲ್ಲಿ ತಾ. 27 ರಂದು ಬೆಳಿಗ್ಗೆ 9.30ಕ್ಕೆ ಮೈಸೂರು ವಿಭಾಗ ಮಟ್ಟದಲ್ಲಿ ಜೀವ ವೈವಿಧ್ಯ ದಿನಾಚರಣೆ ಮತ್ತು ಪರಿಸರ ಸಂರಕ್ಷಣೆ ಕುರಿತ ಕಾರ್ಯಾಗಾರ ಏರ್ಪಡಿಸಲಾಗಿದೆ.

ಈ ಕಾರ್ಯಾಗಾರದಲ್ಲಿ ಪಶ್ಚಿಮಘಟ್ಟದ ಪ್ರಾಮುಖ್ಯತೆ, ಪರಿಸರ ಮತ್ತು ವನ್ಯಜೀವಿಗಳ ಸಂರಕ್ಷಣೆ, ಕಲುಷಿತಗೊಳ್ಳುತ್ತಿರುವ ನಾಡಿನ ಜೀವನದಿ ಕಾವೇರಿಯ ಸಂರಕ್ಷಣೆ, ಕೊಡಗಿನಲ್ಲಿ ಆನೆ-ಮಾನವ ನಡುವಿನ ಸಂಘರ್ಷ, ಅಂತರ್ಜಲ ಕುಸಿತ ಮತ್ತು ಪುನಶ್ಚೇತನ ಕ್ರಮಗಳು, ಘನತ್ಯಾಜ್ಯ ವಸ್ತುಗಳ ಸೂಕ್ತ ವಿಲೇವಾರಿ ಮತ್ತು ನೆಲ-ಜಲ ಸಂರಕ್ಷಣೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸದ್ಬಳಕೆ ಮತ್ತು ಪರಿಸರ ಸಂರಕ್ಷಣೆಯ ಕುರಿತು ಜನಜಾಗೃತಿ ಬೆಳೆಸುವ ದಿಸೆಯಲ್ಲಿ ಈ ಕಾರ್ಯಗಾರವನ್ನು ಸಂಘಟಿಸಲಾಗಿದೆ. ಪರಿಸರಾಸಕ್ತರು ಈ ಶಿಬಿರದಲ್ಲಿ ಭಾಗವಹಿಸಲು 9448588352, 9900370842. ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಿ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ತಿಳಿಸಲಾಗಿದೆ ಎಂದು ರಾಷ್ಟ್ರೀಯ ಪರಿಸರ ಜಾಗೃತಿ ಆಂದೋಲನದ ರಾಜ್ಯ ಸಂಚಾಲಕ ಟಿ.ಜಿ. ಪ್ರೇಮಕುಮಾರ್ ತಿಳಿಸಿದ್ದಾರೆ.