ಮಡಿಕೇರಿ, ಮೇ 31: ಕರ್ನಾಟಕ ರಾಜ್ಯದ ಇತಿಹಾಸದಲ್ಲೆ ಪ್ರಥಮ ಬಾರಿಗೆ ಪೆÇಲೀಸರು ಮುಷ್ಕರಕ್ಕೆ ಮುಂದಾಗಿದ್ದು, ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಆರೋಪಿಸಿರುವ ದಲಿತ ಸಂಘರ್ಷ ಸಮಿತಿ ಸರಕಾರ ಮಾತುಕತೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಸ್. ಕೃಷ್ಣಪ್ಪ ಅಗತ್ಯ ಸೌಲಭ್ಯಗಳಿಂದ ವಂಚಿತರಾಗಿ ಜೂ.4 ರಂದು ನಡೆಸಲು ಉದ್ದೇಶಿಸಿರುವ ಪೆÇಲೀಸರ ಸಾಮೂಹಿಕ ಮುಷ್ಕರಕ್ಕೆ ದಲಿತ ಸಂಘರ್ಷ ಸಮಿತಿ ತನ್ನ ಸಂಪೂರ್ಣ ಬೆಂಬಲವನ್ನು ಸೂಚಿಸುವದಾಗಿ ತಿಳಿಸಿದರು.

ದಸಂಸ ಜಿಲ್ಲಾ ಸಂಘÀಟನಾ ಸಂಚಾಲಕ ಹೆಚ್.ಆರ್. ಪರಶುರಾಮ್ ಮಾತನಾಡಿ, ರಾಜ್ಯ ಮಟ್ಟದಲ್ಲಿ ಪೆÇಲೀಸರ ಕುಂದುಕೊರತೆ ನಿವಾರಣಾ ಸಮಿತಿಯನ್ನು ರಚಿಸಿ ಮೂರು ತಿಂಗಳೊಳಗೆ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕೆಂದು ಒತ್ತಾಯಿಸಿದರು. ಯಾವದೇ ಕಾರಣಕ್ಕೂ ಜೂ.4 ರವರೆಗೆ ಕಾದು ನೋಡುವ ನಿರ್ಲಕ್ಷ್ಯ ಮನೋಭಾವವನ್ನು ತಾಳದೆ ತಕ್ಷಣ ಪೊಲೀಸರ ವೇತನ ತಾರತಮ್ಯವನ್ನು ನಿವಾರಣೆ ಮಾಡಬೇಕೆಂದು ಒತ್ತಾಯಿಸಿದರು.

ಪ್ರಸ್ತುತ ಪೆÇಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಅವರ ಕುಟುಂಬದಲ್ಲಿ ನಡೆಯುವ ಯಾವದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದ ಪರಶುರಾಮ ತಡೆಹಿಡಿದಿರುವ ಆರೋಗ್ಯ ಸೌಲಭ್ಯಗಳನ್ನು ಪೊಲೀಸರ ಕುಟುಂಬಗಳಿಗೆ ನೀಡಬೇಕೆಂದು ಒತ್ತಾಯಿಸಿದರು.

ಪೆÇಲೀಸರ ಮಕ್ಕಳಿಗೆ ಸರಕಾರದ ಖರ್ಚಿನಲ್ಲೆ ಉನ್ನತ ಶಿಕ್ಷಣದವರೆಗೆ ವಿದ್ಯಾಭ್ಯಾಸಕ್ಕೆ ಅವಕಾಶವನ್ನು ಕಲ್ಪಿಸಬೇಕು, ಸಂಪೂರ್ಣ ಶಿಥಿಲಾವಸ್ಥೆಯಲ್ಲಿರುವ ಪೆÇಲೀಸ್ ವಸತಿ ಗೃಹಗಳನ್ನು ದುರಸ್ತಿಗೊಳಿಸಬೇಕಾಗಿದೆ. ಅನೇಕ ಸಮಸ್ಯೆಗಳನ್ನು ಪೆÇಲೀಸರು ಎದುರಿಸುತ್ತಿದ್ದರೂ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳು ದಿವ್ಯ ಮೌನಕ್ಕೆ ಶರಣಾಗಿರುವದು ವಿಪರ್ಯಾಸವೆಂದು ಪರಶುರಾಮ್ ಅಭಿಪ್ರಾಯಪಟ್ಟರು. ಪತ್ರಿಕಾಗೋಷ್ಠಿಯಲ್ಲಿ ದಲಿತÀ ಸಂಘರ್ಷ ಸಮಿತಿಯ ಸದಸ್ಯರುಗಳಾದ ಪುಟ್ಟಯ್ಯ ಹಾಗೂ ರೋಷನ್ ಉಪಸ್ಥಿತರಿದ್ದರು.