ಸಿದ್ದಾಪುರ, ಜೂ. 4: ಮಳೆಗಾಲದಲ್ಲಿ ಪ್ರವಾಹ ಎದುರಾಗುವ ಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಮೀಪದ ಗುಹ್ಯ, ಕರಡಿಗೋಡು, ನೆಲ್ಯಹುದಿಕೇರಿಯ ಬೆಟ್ಟದಕಾಡು, ಬರಡಿ ಮುಂತಾದ ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಪ್ರವಾಹ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ನಂತರ ಮಾತನಾಡಿದ ಅವರು, ಸಿದ್ದಾಪುರ ವ್ಯಾಪ್ತಿಯ ಕಾವೇರಿ ನದಿ ದಡದಲ್ಲಿ ಪ್ರವಾಹ ಸಂಭವಿಸುತ್ತಿದ್ದು, ಅಂತಹ ಪ್ರದೇಶಕ್ಕ ಭೇಟಿ ನೀಡಿ, ಅಧಿಕಾರಿಗಳಿಗೆ ಸಲಹೆ ನೀಡಿದ್ದೇನೆ. ಕಾವೇರಿ ನದಿ ದಡದಲ್ಲಿ ಅಪಾಯದಂಚಿನಲ್ಲಿ ವಾಸವಾಗಿರುವ ಕುಟುಂಬಸ್ಥರಿಗೆ ಶಾಶ್ವತ ವ್ಯವಸೆ ಕಲ್ಪಿಸುವ ಬಗ್ಗೆ ಚಿಂತಿಸಲಾಗುವದು. ಪ್ರವಾಹದ ಸಂದರ್ಭ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ತಹಶೀಲ್ದಾರರು, ಹಾಗೂ ಕಂದಾಯ ಇಲಾಖಾಧಿಕಾರಿಗಳಿಗೆ ಸೂಚಿಲಾಗಿದೆ ಎಂದರು.

ಈ ಸಂದರ್ಭ ವೀರಾಜಪೇಟೆ ತಹಶೀಲ್ದಾರ್ ಮಹದೇವಸ್ವಾಮಿ, ಸೋಮವಾರಪೇಟೆ ತಹಶೀಲ್ದಾರ್ ಶಿವಪ್ಪ, ಉಪ-ತಹಶೀಲ್ದಾರ್ ಚೆಲುವಯ್ಯ, ಕಂದಾಯ ಪರಿವೀಕ್ಷಕರಾದ ಶ್ರೀನಿವಾಸ್, ನಂದಕುಮಾರ್, ಗ್ರಾಮ ಲೆಕ್ಕಿಗರಾದ ಶ್ವೇತಾ, ಮಂಜುನಾಥ್, ಗ್ರಾ.ಪಂ ಸದಸ್ಯ ಹಕೀಂ ಮತ್ತು ಇತರರು ಇದ್ದರು.