ಮಡಿಕೇರಿ, ಜೂ. 11: ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡೆಗಳಲ್ಲಿ ರಾಜ್ಯದಿಂದ ಆಯ್ಕೆಯಾಗಿ ಉನ್ನತ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ “ಏಕಲವ್ಯ ಪ್ರಶಸ್ತಿ” ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟುವಾಗಿ, ತರಬೇತುದಾರರಾಗಿ ನಿರಂತರ ಸೇವೆ ಸಲ್ಲಿಸಿ ಸಾಧನೆ ಮಾಡಿದಂತಹ ಹಿರಿಯ ತರಬೇತುದಾರರಿಗೆ ಕ್ರೀಡಾ ಕ್ಷೇತ್ರದಲ್ಲಿ ಜೀವನ ಪರ್ಯಂತ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವದು. ಗ್ರಾಮೀಣ ಕ್ರೀಡೆಗಳಲ್ಲಿ ವಿಶೇಷ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಮತ್ತು ತರಬೇತುದಾರರು ಅರ್ಜಿ ನಮೂನೆಗಳನ್ನು ತಿತಿತಿ.ಞಚಿಡಿಟಿಚಿಣಚಿಞಚಿಥಿouಣhಠಿoಡಿಣಚಿಟ.iಟಿ ನಲ್ಲಿ ಪಡೆದು ತಾ. 18 ರೊಳಗೆ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ, ಬೆಂಗಳೂರು-560001 ಇವರಿಗೆ ಸಲ್ಲಿಸುವದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08272-228985 ರಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ ಬಾಯಿ ತಿಳಿಸಿದ್ದಾರೆ.