ಕುಶಾಲನಗರ, ಅ. 22: ಕುಶಾಲನಗರ ವ್ಯಾಪ್ತಿಯಲ್ಲಿ ಬೈಕ್ ಕಳವು ಮಾಡುತ್ತಿದ್ದ ತಂಡವೊಂದನ್ನು ಸ್ಥಳೀಯ ನಗರ ಠಾಣಾ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 6 ಬೈಕ್ಗಳನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮುಳ್ಳುಸೋಗೆ ಗ್ರಾಮದ ಧನುಷ್ ಮತ್ತು ಸ್ಟ್ಯಾನ್ಲಿ ಎಂಬವರುಗಳು ಬಂಧಿತ ಆರೋಪಿಗಳು. ಆರೋಪಿಗಳು ಬೆಲೆಬಾಳುವ ಬೈಕ್ಗಳನ್ನು ಕಳವು ಮಾಡಿ ಮಾರಾಟ ಮಾಡುವ ದಂಧೆಯಲ್ಲಿ ತೊಡಗಿದ್ದು ಖಚಿತ ಸುಳಿವಿನ ಮೇರೆಗೆ ಡಿವೈಎಸ್ಪಿ ಸಂಪತ್ ಕುಮಾರ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಕ್ಯಾತೆಗೌಡ ಮತ್ತು ನಗರ ಠಾಣಾಧಿಕಾರಿ ಜಗದೀಶ್ ನೇತೃತ್ವದಲ್ಲಿ ಪೊಲೀಸರ ತಂಡ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.