ಮಡಿಕೇರಿ, ಅ. 15: ಮಾನವೀಯತೆಯೇ ಧರ್ಮ ಎಂಬದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಮಹರ್ಷಿ ವಾಲ್ಮೀಕಿಯ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವದು ಅಗತ್ಯವಾಗಿದೆ ಎಂದು ವಿಧಾನ ಪರಿಷತ್ ಶಾಸಕರಾದ ಸುನಿಲ್ ಸುಬ್ರಮಣಿ ಹೇಳಿದರು. ಜಿಲ್ಲಾಡಳಿತ, ಜಿ.ಪಂ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಆಶ್ರಯದಲ್ಲಿ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿಂದು ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.