ಸೋಮವಾರಪೇಟೆ, ಜೂ. 11: ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ವತಿಯಿಂದ ಸಮೀಪದ ದೊಡ್ಡಮಳ್ತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ವನಮಹೋತ್ಸವ ಆಚರಿಸಲಾಯಿತು.

ಶಾಲಾ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಮೊಹಿಸೀನ್ ಬಾಷಾ ಮಾತನಾಡಿ, ಪರಿಸರ ನಾಶದಿಂದ ಓಜೋನ್ ಪದರಕ್ಕೆ ಹಾನಿಯಾಗುತ್ತಿರುವ ಬಗ್ಗೆ ಆತಂಕ ಎದುರಾಗಿದೆ. ಈ ಕಾರಣದಿಂದ ಪರಿಸರ ರಕ್ಷಣೆಯ ಜವಾಬ್ಧಾರಿ ಎಲ್ಲರ ಮೇಲಿದೆ ಎಂದರು.

ಕ.ರ.ವೇ. ಅಧ್ಯಕ್ಷ ದೀಪಕ್ ಮಾತನಾಡಿ, ಅರಣ್ಯ ನಾಶದಿಂದ ಮುಂದಿನ 4 ದಶಕಗಳಲ್ಲಿ ಜೀವರಾಶಿಗಳಿಗೆ ಕುಡಿಯುವ ನೀರಿಗೆ ಹಾಹಾಕಾರ ಪ್ರಾರಂಭವಾಗಲಿದೆ. ಸರ್ಕಾರ ಅರಣ್ಯ ಅಭಿವೃದ್ಧಿಗೆ ಹೆಚ್ಚಿನ ಯೋಜನೆಗಳನ್ನು ರೂಪಿಸಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸತೀಶ್, ಕ.ರ.ವೇ. ಮಹಿಳಾ ಘಟಕದ ಅಧ್ಯಕ್ಷೆ ರೂಪ ಸುರೇಶ್, ಮುಖ್ಯ ಶಿಕ್ಷಕ ರೇಣುಕಾ ಸ್ವಾಮಿ, ಕರವೇ ಉಪಾಧ್ಯಕ್ಷ ರೋಹಿತ್ ಗೌಡ, ಸಾಹಿತ್ಯ ಘಟಕದ ಅಧ್ಯಕ್ಷ ಸುದರ್ಶನ್, ಮಂಜುನಾಥ್ ಬಿ.ಎಸ್. ರವೀಶ್ ಮತ್ತಿತರರು ಉಪಸ್ಥಿತರಿದ್ದರು.