ಸೋಮವಾರಪೇಟೆ, ಆ. 17: ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಸಾಮೂಹಿಕ ಉಪ ನಯನ ಕಾರ್ಯಕ್ರಮ ನಡೆಯಿತು.

ಪಟ್ಟಣದ ಮಹಿಳಾ ಸಮಾಜದಲ್ಲಿ ಮಂಗಳೂರಿನ ಅರ್ಚಕÀ ವಿಘ್ನೇಶ್ ಪುರೋಹಿತ್ ಅವರ ಪೌರೋಹಿತ್ಯ ದಲ್ಲಿ ಧಾರ್ಮಿಕ ಕಾರ್ಯಕ್ರಮ ನೆರವೇರಿತು. ಸಮಾಜ ಬಾಂಧವರು ಸಾಮೂಹಿಕ ಉಪನಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭ ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷ ಎಸ್.ಜೆ. ದೇವದಾಸ್, ತಾಲೂಕು ಅಧ್ಯಕ್ಷ ಎಸ್.ಬಿ. ಲೀಲಾರಾಂ, ಕಾರ್ಯದರ್ಶಿ ರಾಜು ಹಾಗೂ ಪದಾಧಿಕಾರಿಗಳು ಹಾಜರಿದ್ದರು.