ನಾಪೆÇೀಕ್ಲು, ಆ. 27: ರಾಜ್ಯ ಸರಕಾರ, ಆರೋಗ್ಯ ಇಲಾಖೆ ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದು ಕೊಳ್ಳಬೇಕೆಂದು ವ್ಯೆದ್ಯ ಡಾ. ನವೀನ್ ಹೇಳಿದರು.

ನಾಪೆÇೀಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಸಂತಾನ ಹರಣ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಫಲಾನುಭವಿಗಳಿಗೆ ಇಲಾಖೆಯಿಂದ ನೀಡಲಾದ ಕಿಟ್ ವಿತರಿಸಿ ಅವರು ಮಾತನಾಡಿದರು. ವಿಶ್ವದಲ್ಲಿಯೇ ನಮ್ಮ ದೇಶ ಎಲ್ಲಾ ಕ್ಷೇತ್ರದಲ್ಲಿಯೂ ಮುಂದಿದೆ. ಆದರೆ ಜನಸಂಖ್ಯೆ ನಿಯಂತ್ರಣದಲ್ಲಿ ಮಾತ್ರ ವಿಶ್ವದಲ್ಲಿಯೇ ತಲೆತಗ್ಗಿಸುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಆದರೆ ದೇಶದ ಎಲ್ಲಾ ಜನತೆ ಜನಸಂಖ್ಯಾ ನಿಯಂತ್ರಣಕ್ಕೆ ಮನಸ್ಸು ಮಾಡಿದ್ದಲ್ಲಿ ನಮ್ಮ ದೇಶ ವಿಶ್ವದಲ್ಲಿಯೇ ನಂ. 1 ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭ ಮಡಿಕೇರಿ ತಾಲೂಕು ವ್ಯೆದ್ಯಾಧಿಕಾರಿ ಡಾ. ರವಿ ಕುಮಾರ್, ನಾಪೆÇೀಕ್ಲು ಸಮುದಾಯ ಆರೋಗ್ಯ ಕೇಂದ್ರದ ವ್ಯೆದ್ಯ ಡಾ. ಜಗದೀಶ್ ಮತ್ತಿತರ ಸಿಬ್ಬಂದಿ ಇದ್ದರು.