ಒಡೆಯನಪುರ, ಆ. 27: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆ ಗಳಲ್ಲಿ ಭಾಗವಹಿಸುವದರಿಂದ ವಿದ್ಯಾರ್ಥಿಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿಯೂ ಆರೋಗ್ಯ ವೃದ್ಧಿಸಲು ಸಹಕಾರಿಯಾಗುತ್ತದೆ ಎಂದು ಮಾಜಿ ಜಿ.ಪಂ. ಸದಸ್ಯ ಡಿ.ಬಿ. ಧರ್ಮಪ್ಪ ಅಭಿಪ್ರಾಯಪಟ್ಟರು.ಅಂಕನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನದಲ್ಲಿ ನಡೆದ ಶನಿವಾರಸಂತೆ ಹೋಬಳಿ ಪ್ರಾಥಮಿಕ ಶಾಲಾ ವಲಯಮಟ್ಟದ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.

ಗ್ರಾಮೀಣ ಭಾಗದ ಶಾಲಾ ಪ್ರತಿಭೆಗಳನ್ನು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಶಿಕ್ಷಕರು ಹಾಗೂ ಪೋಷಕರು ಪ್ರೋತ್ಸಾಹಿಸುವಂತೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಕೆ.ಪಿ. ನಾಗೇಶ್ ಅಧ್ಯಕ್ಷತೆ ವಹಿಸಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಪಿ.ಕೆ. ಸಾವಿತ್ರಿ, ಶಿಕ್ಷಕರಾದ ಎಲಿಯಮ್ಮ, ಪಿ.ಟಿ. ಬಿಂದು, ವೆಂಕಟರಮಣಗೌಡ, ಎಸ್‍ಡಿಎಂಸಿ ಉಪಾಧ್ಯಕ್ಷ ಸುರೇಶ್, ಪ್ರಮುಖರಾದ ಶನಿವಾರಸಂತೆ ಕೃಷಿ ಅಧಿಕಾರಿ ಮಂಜುನಾಥ್, ಆನಂದ್, ಚಂದ್ರಶೇಖರ್, ದಮಯಂತಿ ಮತ್ತಿತರರಿದ್ದರು.

- ವಿ.ಸಿ. ಸುರೇಶ್ ಒಡೆಯನಪುರ