ಮಡಿಕೇರಿ, ಜೂ. 9: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಇವರ ಸಂಯುಕ್ತ ಆಶ್ರಯದಲ್ಲಿ ತಾ. 10 ರಂದು (ಇಂದು) ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ಅಂತರ ಜಿಲ್ಲಾ ಸಾಂಸ್ಕøತಿಕ ವಿನಿಮಯ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಮಧ್ಯಾಹ್ನ 2.30 ಗಂಟೆಗೆ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ವಿರೋಧ ಪಕ್ಷದ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ನಗರಸಭೆ ಅಧ್ಯಕ್ಷೆ ಶ್ರೀಮತಿ ಬಂಗೇರಾ, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ವೀಣಾ ಅಚ್ಚಯ್ಯ, ರಾಜ್ಯ ಬಾಲಭವನ ಸೊಸೈಟಿ ಅಧ್ಯಕ್ಷೆ ಭಾವನಾ ಮತ್ತಿತರರು ಭಾಗವಹಿಸಲಿದ್ದಾರೆ.