ಚೆಟ್ಟಳ್ಳಿ, ಅ. 2: ಚೆಟ್ಟಳ್ಳಿಯ ಕಾಫಿ ಸಂಶೋಧನಾ ಕೇಂದ್ರದಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆಯನ್ನು ಆಚರಿಸ ಲಾಯಿತು.

ಚೆಟ್ಟಳ್ಳಿಯ ಕಾಫಿ ಸಂಶೋಧನಾ ಕೇಂದ್ರದ ಸಭಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಕಾಫಿ ದಿನದ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧೆಡೆ ಯಿಂದ ಬಂದ ಕಾಫಿ ಬೆಳಗಾರರು ಕಾಫಿ ತೋಟಗಳಲ್ಲಿ ಉತ್ಪಾದನೆ, ಗುಣಮಟ್ಟ, ಕಾಡಾನೆ ಹಾವಳಿ, ಕಾರ್ಮಿಕರ ಸಮಸ್ಯೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಪರಸ್ಪರ ಚರ್ಚೆ ಮಾಡಲಾಯಿತು. ಜಿಲ್ಲೆಯ ರೈತರ ಸಮಸ್ಯೆಗಳನ್ನು ಬಗಹರಿಸಲು ಸರಕಾರಗಳು ಮುಂದಾಗಬೇಕೆಂದು ಒತ್ತಾಯಿಸಿದರು.

ಕಾಫಿ ಬೆಳೆಗಾರರಾದ ಬೋಸ್ ಮಂದಣ್ಣ, ತಮ್ಮು ಪೂವಯ್ಯ, ಅನುರಾಗ್, ಶಿವಪ್ರಸಾದ್, ಡಿಸೋಜ ಜಯರಾಮ್, ಗೊವಿಂದರಾಜು ಮತ್ತಿತರರು ಭಾಗವಹಿಸಿದ್ದರು.