ಮಡಿಕೇರಿ, ಡಿ. 27: ಇತ್ತೀಚೆಗೆ ಟಿ. ಶೆಟ್ಟಿಗೇರಿಯ ಮಾಯಣಮಾಡ ಮಂದಯ್ಯ ಸರಕಾರಿ ಪ್ರೌಢಶಾಲೆಯಲ್ಲಿ ರೂ. 3.30 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಅಡುಗೆ ಕೊಠಡಿಯನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು.ಸಮಾರಂಭದಲ್ಲಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿ ಸುಬ್ರಮಣಿ, ವೀರಾಜಪೇಟೆ ತಾ.ಪಂ. ಅಧ್ಯಕ್ಷೆ ಸ್ಮಿತಾ ಪ್ರಕಾಶ್, ಗ್ರಾ.ಪಂ. ಅಧ್ಯಕ್ಷ ಸುಮಂತ್, ದಾನಿಗಳಾದ ಮಾಯಣಮಾಡ ಪೂಣಚ್ಚ, ತಾ.ಪಂ. ಸದಸ್ಯೆ ಸರೋಜ, ಮುಖ್ಯ ಶಿಕ್ಷಕಿ ಚಿರಿಯಪಂಡ ರುಕ್ಮಿಣಿ ನಾಣಯ್ಯ, ಅರುಣ್ ಭೀಮಯ್ಯ, ಗ್ರಾ.ಪಂ. ಸದಸ್ಯರುಗಳು, ಸ್ಥಳೀಯ ಪ್ರಮುಖರು ಹಾಜರಿದ್ದರು.