ಶನಿವಾರಸಂತೆ, ಡಿ. 19: ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಶಾಂತಪುರ ಗ್ರಾಮದ ಅಂಗನವಾಡಿ ಕೇಂದ್ರದ ಅಡುಗೆ ಮನೆ ನಿರ್ಮಾಣಕ್ಕೆ ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪ ರಾಜೇಶ್ ಅವರು ರೂ. 1 ಲಕ್ಷ ಅನುದಾನ ನೀಡಿದ್ದು, ಕಾಮಗಾರಿಗೆ ಮಾಜಿ ಸಚಿವ ಬಿ.ಎ. ಜೀವಿಜಯ ಭೂಮಿಪೂಜೆ ನೆರವೇರಿಸಿದರು.ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಹೆಚ್.ಬಿ. ಜಯಮ್ಮ, ತಾಲೂಕು ಜೆ.ಡಿ.ಎಸ್. ಪ್ರಧಾನ ಕಾರ್ಯದರ್ಶಿ ಚಂಗಪ್ಪ, ಹೋಬಳಿ ಜೆ.ಡಿ.ಎಸ್. ಅಧ್ಯಕ್ಷ ತಮ್ಮಯ್ಯ, ಪ್ರಮುಖರಾದ ನಾಗೇಶ್, ಬಾಬು ಪೂಜಾರಿ, ಅರ್ಜುನ್, ಸರೋಜಿನಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.