ಕುಶಾಲನಗರ, ನ. 7: ಕುಶಾಲನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಆಶ್ರಯದಲ್ಲಿ ಸಾರಿಗೆ ಬಸ್ ನಿಲ್ದಾಣದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ 17ನೇ ವರ್ಷದ ಎರಡು ದಿನಗಳ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಆಟೋ ಚಾಲಕರು, ಮಾಲೀಕರು ಹಾಗೂ ಸಾರ್ವಜನಿಕ ರಿಗೆ ರಕ್ತದಾನ ಶಿಬಿರ ಹಮ್ಮಿಕೊಳ್ಳ ಲಾಗಿತ್ತು.

ರೋಟರಿ ಮೈಸೂರು ಚಂದ್ರಕಲಾ ಆಸ್ಪತ್ರೆಯ ರಕ್ತನಿಧಿ ಘಟಕದ ವೈದ್ಯರಾದ ಡಾ.ಕ್ರಿಸ್ಟಿ ಮತ್ತು ಡಾ.ಚೇತನ್ ನೇತೃತ್ವದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 50ಕ್ಕೂ ಅಧಿಕ ಮಂದಿ ಸಾರ್ವಜನಿಕರು ಹಾಗೂ ಆಟೋ ಚಾಲಕರು ರಕ್ತದಾನದಲ್ಲಿ ಪಾಲ್ಗೊಂಡರು. ಈ ಸಂದರ್ಭ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಮಹೇಶ್ ಸೇರಿದಂತೆ ಸಂಘದ ಪದಾಧಿಕಾರಿಗಳು, ರಕ್ತನಿಧಿ ಘಟಕದ ಸಿಬ್ಬಂದಿಗಳು ಇದ್ದರು.