ಸುಂಟಿಕೊಪ್ಪ, ಅ. 8: ಸುಂಟಿಕೊಪ್ಪ ವಾಹನ ಚಾಲಕರ ಸಂಘದ 46ನೇ ವಾರ್ಷಿಕೋತ್ಸವ ಅಂಗವಾಗಿ ತಾ. 10 ರಂದು ಅದ್ಧೂರಿಯಿಂದ ಆಯುಧಾ ಪೂಜಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಬಿ.ಎ. ತಿಮ್ಮಪ್ಪ ಹಾಗೂ ಕೊಡಗು ಜಿಲ್ಲಾ ವಾಹನ ಚಾಲಕರ ಸಂಘದ ಅಧ್ಯಕ್ಷ ಎಂ.ಎ. ಉಸ್ಮಾನ್ ತಿಳಿಸಿದ್ದಾರೆ.

‘ನ್ಯೂಸ್ ಗ್ಯಾಲರಿ’ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವಾಹನ ಚಾಲಕರ ಸಂಘ ಕಳೆದ 45 ವರ್ಷಗಳಿಂದ ಜಿಲ್ಲೆಗೆ ಮಾದರಿಯಾಗಿ ಸಡಗರ-ಸಂಭ್ರಮ ಹಾಗೂ ಅದ್ಧೂರಿಯಾಗಿ ಆಯುಧಾ ಪೂಜಾ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಅದೇ ರೀತಿ ತಾ. 10 ರಂದು ರಾತ್ರಿ 8.30ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ವಹಿಸಿಲಿದ್ದಾರೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ಸಮಾರಂಭದ ಉದ್ಘಾಟನೆ ನೆರವೇರಿಸುವರು.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಮ್, ವಕ್ಫ್ ಮತ್ತು ಉನ್ನತ ಶಿಕ್ಷಣ ಸಚಿವ ತನ್ವೀರ್ ಶೇಟ್, ಶಾಸಕಿ ವೀಣಾ ಅಚ್ಚಯ್ಯ, ಮಾಜಿ ಸಂಸದ ಅಡಗೂರು ವಿಶ್ವನಾಥ್, ಕರ್ನಾಟಕ ರಾಜ್ಯ ಇಂಟಕ್ ಉಪಾಧ್ಯಕ್ಷ ನಾಪಂಡ ಮುತ್ತಪ್ಪ, ಇಂಟಕ್‍ನ ರಾಜ್ಯ ಕಾರ್ಯದರ್ಶಿ ನಾಪಂಡ ಮುದ್ದಪ್ಪ, ಜಿ.ಪಂ. ಸದಸ್ಯರಾದ ಕೆ.ಪಿ. ಚಂದ್ರಕಲಾ, ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎಂ. ಲತೀಫ್, ಗ್ರಾ.ಪಂ. ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್, ಮಾಜಿ ಶಾಸಕ ಕೆ.ಎಂ. ಇಬ್ರಾಹಿಂ, ಜಿಲ್ಲಾ ವಾಹನ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಎಂ.ಎ. ಉಸ್ಮಾನ್, ಕಾಫಿ ಬೆಳೆಗಾರ ಆನಂದ ಬಸಪ್ಪ, ಸಿದ್ದಲಿಂಗಪುರದ ಕೃಷಿಕ ಎ.ಎಸ್. ರಾಮಣ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಜೇಂದ್ರ ಪ್ರಸಾದ್, ತಾಲೂಕು ಪಂಚಾಯಿತಿ ಸದಸ್ಯೆ ಓಡಿಯಪ್ಪನ ವಿಮಲಾವತಿ, ಹಾಸನ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷ ಎ. ಲೋಕೇಶ್ ಕುಮಾರ್, ಕಾಫಿ ಬೆಳೆಗಾರ ವಿನೋದ್ ಶಿವಪ್ಪ, ಕೊಡಗು ಜಿಲ್ಲಾ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷ ಪಿ.ಸಿ. ಹಸೈನಾರ್, ವಿ.ಎಸ್.ಎಸ್.ಎನ್. ಬ್ಯಾಂಕ್ ಅಧ್ಯಕ್ಷ ಎನ್.ಸಿ. ಪೊನ್ನಪ್ಪ (ಕ್ಲೈವಾ), ಮರ ವ್ಯಾಪಾರಿಗಳಾದ ಎ.ಬಿ. ಅಜೀಜ್ ಮತ್ತಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ತಿಮ್ಮಪ್ಪ ಮತ್ತು ಉಸ್ಮಾನ್ ಮಾಹಿತಿ ನೀಡಿದರು.

ದಿನದ ಅಂಗವಾಗಿ ಬೆಂಗಳೂರಿನ ಮುಖೇಶ್ ಮ್ಯೂಸಿಕ್ ಅಂಡ್ ಈವೆಂಟ್ಸ್ ತಂಡದಿಂದ ಸಂಗೀತ ರಸಮಂಜರಿ ನಡೆಯಲಿದೆ. ವಿವಿಧ ವಾಹನಗಳ ಅಲಂಕಾರ ಸ್ಪರ್ಧೆ, ಅಂಗಡಿ, ವಕ್ರ್ಸ್‍ಶಾಪ್ ಮತ್ತು ಕಚೇರಿಗಳ ಅಲಂಕಾರ ಸ್ಪರ್ಧೆ ಹಾಗೂ ಇನ್ನಿತರ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಸಮಾರಂಭದಲ್ಲಿ ಉಪಾಸಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವಿನೋದ್ ಶಿವಪ್ಪ ಮತ್ತು ಕರ್ನಾಟಕ ರಾಜ್ಯ ಇಂಟಕ್‍ನ ಉಪಾಧಕ್ಷರೂ, ಸಂಗೀತ ರಸಮಂಜರಿಯ ಪ್ರಾಯೋಜಕ ನಾಪಂಡ ಎಂ. ಮುತ್ತಪ್ಪ ಅವರನ್ನು ಸನ್ಮಾನಿಸಲಾಗುವದು ಎಂದು ಅವರು ಹೇಳಿದರು.

ಗೋಷ್ಠಿಯಲ್ಲಿ ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಕಾರ್ಯದರ್ಶಿ ಎಸ್. ಸುರೇಶ್, ಮಾಜಿ ಅಧ್ಯಕ್ಷರುಗಳಾದ ಬಿ.ಎಂ. ಪೂವಪ್ಪ, ಎ. ಹಂಸ (ಅಚ್ಚುಪ), ಕೆ.ವಿ. ಕಿಟ್ಟಣ್ಣ ರೈ, ಎ.ಎ. ಜಬ್ಬಾರ್ ಕಂಬಿಬಾಣೆ, ಸಾಂಸ್ಕøತಿಕ ಕಾರ್ಯದರ್ಶಿ ಬಿ.ಎ. ಕೃಷ್ಣಪ್ಪ ಹಾಗೂ ಇನ್ನಿತರರು ಉಪಸ್ಥಿತರಿದ್ದರು.