ಮೂರ್ನಾಡು, ಅ. 17: ಮೈಸೂರು ವಿಭಾಗ ಮಟ್ಟದ 2016-17ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಾಲಕ, ಬಾಲಕಿಯರ ಫುಟ್ಬಾಲ್ ಪಂದ್ಯಾವಳಿ ತಾ. 18 ರಿಂದ (ಇಂದಿನಿಂದ) ನಡೆಯಲಿದೆ.
ಜಿಲ್ಲಾ ಪಂಚಾಯತ್, ಕೊಡಗು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಡಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಮೂರ್ನಾಡು ವಿದ್ಯಾಸಂಸ್ಥೆ ಆಟದ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿಯ ಉದ್ಘಾಟನೆ ಅಪರಾಹ್ನ 2 ಗಂಟೆಗೆ ನಡೆಯಲಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ.ಎ. ಹರೀಶ್ ಉದ್ಘಾಟನೆ ನೆರವೇರಿಸಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಸೀತಾರಾಂ, ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಮೂಕಂಡ ಶಶಿ ಸುಬ್ರಮಣಿ, ವಿಧಾನ ಸಭಾ ಸದಸ್ಯ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯರುಗಳಾದ ಗಣೇಶ್ ಕಾರ್ಣಿಕ್, ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ಜಿಲ್ಲಾ ಪಂಚಾಯತ್ ಸದಸ್ಯೆ ಕಲಾವತಿ ಪೂವಪ್ಪ, ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಲುಮುಟ್ಲು ಜಮುನಾ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಡಿಕೇರಿ ವಿಧಾನ ಸಭಾ ಸದಸ್ಯ ಎಂ.ಪಿ. ಅಪ್ಪಚ್ಚು ರಂಜನ್ ವಹಿಸಲಿದ್ದಾರೆ.