ಕುಶಾಲನಗರ, ಅ. 14: ಸೋಮವಾರಪೇಟೆ ತಾಲೂೀಕು ಆಡಳಿತ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ ತಾ. 15 ರಂದು (ಇಂದು) ಕುಶಾಲನಗರದ ಮುಳ್ಳುಸೋಗೆಯ ವಾಲ್ಮೀಕಿ ಭವನದಲ್ಲಿ ನಡೆಯಲಿದೆ.

ಸೋಮವಾರಪೇಟೆ ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪ ರಾಜೇಶ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ, ಕೊಡಗು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ್ ವಿಧಾನ ಪರಿಷತ್ ಸದಸ್ಯರುಗಳಾದ ವೀಣಾ ಅಚ್ಚಯ್ಯ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಎಂ.ಪಿ. ಸುನಿಲ್ ಸುಬ್ರಮಣಿ, ಸಂಸದ ಪ್ರತಾಪ್‍ಸಿಂಹ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.