ಕುಶಾಲನಗರ, ಜ. 17: ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕ್ರಿಯಾಶೀಲ ಅಭಿವೃದ್ಧಿ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ವಿಶ್ವಮಾನವ ಹಕ್ಕು ದಿನಾಚರಣೆ ಪ್ರಯುಕ್ತ ತಾ. 18 ರಂದು ಇಂದು ಮಾನವ ಹಕ್ಕುಗಳು ಹಾಗೂ ಕಾನೂನು ಅರಿವು ಸಂವಾದ ಕಾರ್ಯಕ್ರಮ ಕಣಿವೆಯಲ್ಲಿ ನಡೆಯಲಿದೆ ಎಂದು ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ನಾರಾಯಣ ತಿಳಿಸಿದ್ದಾರೆ.
ಕುಶಾಲನಗರದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯ ಸಭಾಂಗಣದಲ್ಲಿ ಬೆಳಗ್ಗೆ 10.30 ಗಂಟೆಗೆ ಹೆಬ್ಬಾಲೆ ಗ್ರಾಮ ಪಂಚಾಯ್ತಿ ಸದಸ್ಯರಾದ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಮತ್ತು ನ್ಯಾಯಾಧೀಶರಾದ ಮೋಹನ್ ಪ್ರಭು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ವಕೀಲರಾದ ಅಭಿಮನ್ಯುಕುಮಾರ್, ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ಎಸ್ .ಲತಾ, ಅಭಿವೃದ್ಧಿ ಅಧಿಕಾರಿ ಹೆಚ್.ಈ.ರಾಕೇಶ್, ಮಡಿಕೇರಿಯ ಮಹಿಳಾ ಠಾಣೆಯ ಮಹಿಳಾ ಸಹಾಯಕ ಉಪ ನಿರೀಕ್ಷಕರಾದ ಬಿ.ಎಸ್. ವಾಣಿಶ್ರೀ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ರೈತ ವಿಭಾಗದ ರಾಜ್ಯ ಕಾರ್ಯದರ್ಶಿ ಪಾರ್ವತಿ, ಸಂಘಟನಾ ಕಾರ್ಯದರ್ಶಿ ಸೂಫಿ, ಪ್ರಮುಖರಾದ ಗಣೇಶ್ ಕುಮಾರ್, ಅನಿತ್ ಇದ್ದರು.