ಮಡಿಕೇರಿ, ನ. 27: ಕೊಡಗು ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಹಾಕತ್ತೂರಿನ ಕುವೆಂಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರ ನಡೆಯಿತು. ಮಡಿಕೇರಿ ತಾ. ಪಂ. ಸದಸ್ಯೆ ಕುಮುದಾ ಶಿಬಿರವನ್ನು ಉದ್ಘಾಟಿಸಿದರು. ಗ್ರಾ.ಪಂ. ಅಧ್ಯಕ್ಷೆ ಶಾರದಾ ಅಧ್ಯಕ್ಷತೆ ವಹಿಸದ್ದರು. ಗ್ರಾ.ಪಂ. ಉಪಾಧ್ಯಕ್ಷ ವಿಷ್ಣು ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೆಬಾಸ್ಟಿನ್, ಸದಸ್ಯರಾದ ಪಿಯೂಷ್ ಪಿರೇರ ಹಾಗೂ ಸರೋಜಾ, ಶಾಲಾ ಮುಖ್ಯೋಪಾಧ್ಯಾಯ ಸ್ವಾಮಿ ಇದ್ದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ. ರಾಮಚಂದ್ರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ. ಅಮೂಲ್ಯ ಸ್ವಾಗತಿಸಿ ವಂದಿಸಿದರು. ವೀರಾಜಪೇಟೆಯ ಸರಕಾರಿ ಆಯುರ್ವೇದ ಆಸ್ಪತ್ರೆಯ ಡಾ. ಈಶ್ವರಿ ಕಾರ್ಯಕ್ರಮವನ್ನು ಆಯೋಜಿಸಿದ್ದರು.