ಸೋಮವಾರಪೇಟೆ, ಜು. 20: ರೇಡಿಯಂಟ್ ಕ್ಯಾನ್ಸರ್ ಆಸ್ಪತ್ರೆ ಹಾಗೂ ಇಲ್ಲಿನ ರೋಟರಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ ಸ್ಥಳೀಯ ಮಹಿಳಾ ಸಮಾಜದಲ್ಲಿ ನಡೆಯಿತು.ರೇಡಿಯಂಟ್ ಕ್ಯಾನ್ಸರ್ ಆಸ್ಪತ್ರೆಯ ವೈದ್ಯರಾದ ನಮಿತಾ ಮಾತನಾಡಿ, ಕ್ಯಾನ್ಸರ್ ರೋಗ ಗುಣಪಡಿಸಲಾಗದ ಕಾಯಿಲೆ ಅಲ್ಲ. ಇಂದು ತಂತ್ರಜ್ಞಾನ ಬೆಳೆದಿದ್ದು, ಸೂಕ್ತ ಸಮಯದಲ್ಲಿ ತಪಾಸಣೆಗೊಳಗಾಗಿ ಚಿಕಿತ್ಸೆ ಪಡೆದಲ್ಲಿ ಕಾಯಿಲೆಯನ್ನು ಸಂಪೂರ್ಣವಾಗಿ ಗುಣಪಡಿಸಬಹುದು ಎಂದು ಹೇಳಿದರು.ರೋಟರಿ ಸಂಸ್ಥೆಯ ಅಧ್ಯಕ್ಷ ಭರತ್ ಭೀಮಯ್ಯ ಮಾತನಾಡಿ, ಸಂಸ್ಥೆಯು ಪ್ರತಿ ವರ್ಷ ಉಚಿತ ಆರೋಗ್ಯ ಶಿಬಿರಗಳನ್ನು ನಡೆಸಿಕೊಂಡು ಬರುತ್ತಿದೆ. ಇಂದಿನ ಶಿಬಿರದಲ್ಲಿ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಆಗಮಿಸಿ ಶಿಬಿರದ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ. ಇಂದಿನ ತಪಾಸಣಾ ಶಿಬಿರದಲ್ಲಿ 10 ಮಂದಿಗೆ ಕ್ಯಾನ್ಸರ್ ಕಾಯಿಲೆ ಇರುವದು ದೃಢಪಟ್ಟಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಇವರನ್ನು ಮೈಸೂರಿನ ರೇಡಿಯಂಟ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದರು.ಶಿಬಿರದಲ್ಲಿ ರೋಟರಿ ಸಂಸ್ಥೆಯ ಪದಾಧಿಕಾರಿಗಳಾದ ವನಮಾಲಿ ಹೆಬ್ಬಾರ್, ಮೋಹನ್ರಾಮ್, ಪ್ರಕಾಶ್ಕುಮಾರ್, ಬಿ.ಎಸ್. ಸದಾನಂದ, ಎ.ಪಿ. ವೀರರಾಜು, ಆಸ್ಪತ್ರೆಯ ಸಹಾಯಕಿ ಅಶ್ವಿನಿ ಮತ್ತಿತರರು ಪಾಲ್ಗೊಂಡಿದ್ದರು.