ಮಡಿಕೇರಿ, ಡಿ.27 : ಬೆಟ್ಟಗೇರಿ ಗ್ರಾಮದ ಉದಯ ವಿದ್ಯಾ ಸಂಸ್ಥೆ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು, ಮೂರು ದಿನಗಳ ಕಾಲ ನಡೆಯುವ ವೈವಿಧ್ಯಮಯ ಕಾರ್ಯಕ್ರಮಕ್ಕೆ ತಾ.29 ರಂದು ಚಾಲನೆ ದೊರೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ತಳೂರು ಕಿಶೋರ್ ಕುಮಾರ್ ತಾ.29 ರಿಂದ 31 ರವರೆಗೆ ಶಾಲಾ ಆವರಣದಲ್ಲಿ ನಡೆಯುವ ಸುವರ್ಣ ಮಹೋತ್ಸವದ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ತಾ.29 ರಂದು ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಕೊಡಪಾಲು ಎಸ್.ಗಣಪತಿ ಅವರು ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸಲಿದ್ದು, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿಯವರು ಕ್ರೀಡಾ ಜ್ಯೋತಿ ಬೆಳಗಿಸಲಿದ್ದಾರೆ. ವಿದ್ಯಾರ್ಥಿಗಳ ಪಥ ಸಂಚಲನಕ್ಕೆ ವಕೀಲ ಕೆ.ಎ. ಕುಟ್ಟಪ್ಪ ಚಾಲನೆ ನೀಡಲಿದ್ದು, ಉದಯ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಬಿ.ಎಂ. ಮೇದಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕಾರ್ಪೋ ರೇಷನ್ ಬ್ಯಾಂಕ್‍ನ ಬೆಟ್ಟಗೇರಿ ಶಾಖೆಯ ಪ್ರಬಂಧಕ ಕುಮಾರ್ ಅಭಿಷೇಕ್ ಹಾಗೂ ಜಿಲ್ಲಾ ದೈಹಿಕ ಪರಿವೀಕ್ಷಕ ಮೃತ್ಯಂಜಯ ಪಾಲ್ಗೊಳ್ಳಲಿದ್ದಾರೆ. ಹಳೆ ವಿದ್ಯಾರ್ಥಿ ಗಳು ಮತ್ತು ಸಾರ್ವಜನಿಕರಿಗಾಗಿ ನಡೆಯುವ ಆಟೋಟ ಸ್ಪರ್ಧೆಗಳನ್ನು ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕ ಎಂ.ಪಿ. ಕವಿತ ಉದ್ಘಾಟನೆ ಮಾಡಲಿದ್ದಾರೆ.

ಸಮಾರಂಭವನ್ನು ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಕೆ.ಎಸ್. ಪುಟ್ಟಯ್ಯ ಉದ್ಘಾಟಿಸಲಿದ್ದು, ವಿದ್ಯಾಸಂಸ್ಥೆಯ ಅಧ್ಯಕ್ಷ ತಳೂರು ಎ. ಕಿಶೋರ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ತಾ.30 ರಂದು ಕ್ರೀಡಾಕೂಟವನ್ನು ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನೆಯ್ಯಣೀರ ಸತೀಶ್ ಉದ್ಘಾಟಿಸಲಿದ್ದಾರೆ. ಉದಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಕೆ.ಬಿ. ಸೀತಮ್ಮ ಹಾಗೂ ಕಾಫಿ ಬೆಳೆಗಾರ ಬಿ.ಎಂ.ಜಗದೀಶ್ ರೈ ವಿವಿಧ ಆಟೋಟ ಸ್ಪರ್ಧೆಗಳಿಗೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ ನಡೆಯುವ ಸಮಾರೋಪ ಸಮಾರಂಭವನ್ನು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಬಿ.ಎ. ಹರೀಶ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪತಿಷತ್ ಸದಸ್ಯ ಗಣೇಶ್ ಕಾರ್ಣಿಕ್ ಮತ್ತಿತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಸಂಜೆ ಹಳೇ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ತಾ.31 ರಂದು ಬೆಟ್ಟಗೇರಿ ಗಣಪತಿ ದೇವಸ್ಥಾನದಿಂದ ವಿದ್ಯಾರ್ಥಿಗಳ ಮೆರವಣಿಗೆ ನಡೆಯಲಿದ್ದು, ಜಿಲ್ಲಾ ಪಂಚಾಯಿತಿ ಸದಸ್ಯ ಮುರಳಿ ಚಾಲನೆ ನೀಡಲಿದ್ದಾರೆÀ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಹಾಗೂ ಕಾಫಿ ಬೆಳೆಗಾರ ಕಾರೇರ ಕವನ್ ಮಾದಪ್ಪ ಉಪಸ್ಥಿತರಿರುವರು. ಮಧ್ಯಾಹ್ನ ನಡೆಯುವ ಸಮಾರೋಪ ಸಮಾರಂಭವನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಲಿದ್ದು, ಸಂಸದ ಪ್ರತಾಪ ಸಿಂಹ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜು ಮತ್ತಿತರ ಪ್ರಮುಖರು ಉಪಸ್ಥಿತರಿರುವರು.

ಸನ್ಮಾನ ಸಮಾರಂಭದಲ್ಲಿ ಸ್ಥಳ ದಾನಿಗಳಾದ ಮೇಲತ್ತಂಡ, ಚಳಿಯಂಡ, ಕಟ್ರತಂಡ ಹಾಗೂ ಚಂಡಾಂದೀರ ಕುಟುಂಬಸ್ಥರನ್ನು ಸನ್ಮಾನಿಸಲಾಗುವದು. ಸಂಜೆ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆಯೆಂದು ತಳೂರು ಕಿಶೋರ್ ಕುಮಾರ್ ತಿಳಿಸಿದರು.

ಉದಯ ವಿದ್ಯಾಸಂಸ್ಥೆ 9.50 ಏಕರೆ ಜಾಗವನ್ನು ಹೊಂದಿದ್ದು, 3 ಎಕರೆ ಕಾಫಿ ತೋಟವಿದೆ. ಪ್ರಸ್ತುತ ಶಾಲೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ 204 ಹಾಗೂ ಕನ್ನಡ ಮಾಧ್ಯಮದಲ್ಲಿ 180 ಮಂದಿ ವ್ಯಾಸಂಗ ಮಾಡುತ್ತಿದ್ದು, 10ನೇ ತರಗತಿಯಲ್ಲಿ ಶೇ.100 ರಷ್ಟು ಸಾಧನೆ ಮಾಡಲಾಗುತ್ತಿದೆಯೆಂದು ತಳೂರು ಕಿಶೋರ್ ಕುಮಾರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಬಿ.ಎಂ. ಮೇದಪ್ಪ, ಖಜಾಂಚಿ ಕೆ.ಜಿ. ಗಣೇಶ್, ನಿರ್ದೇಶಕ ಕೊಡಪಾಲು ಎಸ್. ಗಣಪತಿ ಹಾಗೂ ಮುಖ್ಯ ಶಿಕ್ಷಕಿ ಎಂ.ಪಿ. ಕವಿತ ಉಪಸ್ಥಿತರಿದ್ದರು.