ಕುಶಾಲನಗರ, ಜು. 28: ಹಾರಂಗಿ ಪ್ರವಾಸಿ ಮಂದಿರದ ಆವರಣದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಅವರು ಗಿಡ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಕಾವೇರಿ ಪರಿಸರ ರಕ್ಷಣಾ ಬಳಗದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾರಂಗಿ ಯೋಜನಾ ವೃತ್ತದ ಮುಖ್ಯ ಅಧೀಕ್ಷಕ ಅಭಿಯಂತರ ಬಿ. ಶಿವಶಂಕರ್, ನೀರು ಬಳಕೆದಾರರ ಮಹಾಮಂಡಳದ ಅಧ್ಯಕ್ಷ ಎಸ್.ಸಿ. ಚೌಡೇಗೌಡ, ಕಾಂಗ್ರೆಸ್ ಪ್ರಮುಖರಾದ ಮಿಟ್ಟು ಚಂಗಪ್ಪ, ಕೆ.ಕೆ. ಮಂಜುನಾಥ್ ಕುಮಾರ್, ಕಾವೇರಿ ಪರಿಸರ ಸಂರಕ್ಷಣಾ ಬಳಗದ ಸಂಚಾಲಕ ಎಂ.ಎನ್. ಚಂದ್ರಮೋಹನ್, ಡಿ.ಆರ್. ಸೋಮಶೇಖರ್ ಮತ್ತಿತರರು ಇದ್ದರು.