ಮಡಿಕೇರಿ, ಆ. 24: ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಂ ಅವರು ತಾ. 26 ಮತ್ತು 27 ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ತಾ. 26 ರಂದು ಬೆಳಗ್ಗೆ 11 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆಯುವ ಕೆ.ಡಿ.ಪಿ. ಸಭೆಯಲ್ಲಿ ಭಾಗವಹಿಸಲಿದ್ದಾರೆ. 27 ರಂದು ಬೆಳಗ್ಗೆ 11 ಗಂಟೆಗೆ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿ ಗುರುತಿಸಲಾಗಿರುವ ನಗರದ ಖಾಸಗಿ ಬಸ್ ನಿಲ್ದಾಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಲಿದ್ದಾರೆ. ನಂತರ 11.30 ಗಂಟೆಗೆ ಕೆ.ನಿಡುಗಣೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಗುರುತಿಸಲಾಗಿರುವ ಜಾಗದಲ್ಲಿ ಜಿ.ಪಂ. ನೂತನ ಕಟ್ಟಡದ ಕಾಮಗಾರಿಗೆ ಶಿಲನ್ಯಾಸ ನೆರವೇರಿಸಲಿದ್ದಾರೆ. ಮಧ್ಯಾಹ್ನ 12.30 ಗಂಟೆಗೆ ವೀರಾಜಪೇಟೆ ತಾಲೂಕು ಕಚೇರಿಯಲ್ಲಿ ಜನಸಂಪರ್ಕ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.